ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security Forces) ನಡೆದ ಗುಂಡಿನ ಚಕಮಕಿಯಲ್ಲಿ (Gunfight) ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ.
#WATCH | Pulwama encounter: The house in Nihama area where terrorists are trapped, is on fire. Encounter underway. Further details awaited. #JammuAndKashmir pic.twitter.com/YezIyxo8ed
— ANI (@ANI) June 3, 2024
ಭಾರತೀಯ ಸೇನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಉಪಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಟಾಪ್ ಕಮಾಂಡರ್‌ಗಳು (Lashkar Commander), ಮನೆಯೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು
ಪುಲ್ವಾಮಾದ (Pulwama) ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರು ಮನೆಯೊಂದರಲ್ಲಿ ಅಡಗಿದ್ದಾರೆ ಎಂಬುದರ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಗುಂಡಿನ ದಾಳಿ ನಡೆಸಿದ್ದವು. ಈ ವೇಳೆ ಪಾಕ್ ಮೂಲದ ಉಗ್ರರರಿಂದಲೂ ಪ್ರತಿದಾಳಿ ನಡೆದಿದ್ದು, ಕೊನೆಗೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಸೇನಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ.
ಭಯೋತ್ಪಾದಕರಾದ ರಯೀಸ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ದಾರ್ ಇಬ್ಬರೂ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು ಎಂದು ಸೇನೆ ಖಚಿತಪಡಿಸಿದೆ. ಇದನ್ನೂ ಓದಿ: Election Results – ಟ್ರೆಂಡ್ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ವಲಯದ ಪೊಲೀಸರು, ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿವೆ. ಈವರೆಗೆ ಸಾವು ನೋವುಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಮೇ 7ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರಯಾ ಪಡೆದಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದರು. ಇದನ್ನೂ ಓದಿ: ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್ ದರ ಏರಿಕೆ