ಆಡಳಿತಾರೂಢ ವೈಎಸ್‌ಆರ್‌ಸಿಪಿ ಧೂಳಿಪಟ – ಟಿಡಿಪಿ ತೆಕ್ಕೆಗೆ ಆಂಧ್ರ

Public TV
2 Min Read
narendra modi chandrababu naidu pawan kalyan

– ಜೂ.9 ರಂದು ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ?

ಅಮರಾವತಿ: ಆಂಧ್ರಪ್ರದೇಶ (Andhra Pradesh) ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ಟಿಡಿಪಿ ಭರ್ಜರಿ ಜಯ ಸಾಧಿಸಿದೆ. ಇದೇ ಜೂ.9 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

175 ವಿಧಾನಸಭಾ ಸ್ಥಾನಗಳ ಪೈಕಿ ಟಿಡಿಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 68 ರಲ್ಲಿ ಮುಂದಿದೆ. ಆದರೆ ಜನಸೇನಾ ಪಕ್ಷವು 21 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 8 ಸ್ಥಾನಗಳನ್ನು ಗೆದ್ದರೆ, ವೈಎಸ್‌ಆರ್‌ಸಿಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಇದನ್ನೂ ಓದಿ: Assembly Results: ಆಂಧ್ರದಲ್ಲಿ ಟಿಡಿಪಿ ಮತ್ತೆ ಎಂಟ್ರಿ – ಒಡಿಶಾದಲ್ಲಿ ಬಿಜೆಪಿಗೆ ಬಹುಮತ

cm jagan mohan reddy

ನಾಯ್ಡು ಜೂನ್ 9 ರಂದು ಅಮರಾವತಿಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಫಲಿತಾಂಶದ ಬೆನ್ನಲ್ಲೇ ಸೋಲೊಪ್ಪಿಕೊಂಡ ಜಗನ್ ರೆಡ್ಡಿ ಆಂಧ್ರಪ್ರದೇಶ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಫಲಿತಾಂಶದ ಬಳಿಕ ಮಾತನಾಡಿದ ನಿರ್ಗಮಿತ ಸಿಎಂ ಜಗನ್‌ (Jagan Mohan Reddy), ನಮ್ಮಿಂದ ಏನು ತಪ್ಪಾಗಿದೆ ಎಂದು ತಿಳಿದಿಲ್ಲ. ಆದರೆ ನಾನು ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಧ್ವನಿಯಿಲ್ಲದವರಿಗೆ ಧ್ವನಿ ನೀಡಿದ್ದೇನೆ. ಗೆದ್ದವರಿಗೆ ಆಲ್ ದಿ ಬೆಸ್ಟ್ ಎಂದು ಟಿಡಿಪಿ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಾರಣಾಸಿಯಲ್ಲಿ ಮೋದಿಗೆ ಹ್ಯಾಟ್ರಿಕ್‌ ಜಯ – ಕಡಿಮೆಯಾಯ್ತು ಗೆಲುವಿನ ಅಂತರ

pawan kalyan with chandrababu naidu 1

ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟದ ಅದ್ಭುತ ಪ್ರದರ್ಶನದ ನಂತರ ಚಂದ್ರಬಾಬು ನಾಯ್ಡು ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದರು. ಮೈತ್ರಿಕೂಟ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆದ್ದಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಶಾ ಇಬ್ಬರನ್ನೂ ಅಭಿನಂದಿಸಿದ್ದಾರೆ. ಪಿಎಂ ಹಾಗೂ ಕೇಂದ್ರ ಗೃಹ ಸಚಿವರೂ ಸಹ ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.

ಪಕ್ಷಗಳ ಈಗಿನ ಬಲಾಬಲ
ಟಿಡಿಪಿ – 134
ಜೆಎನ್‌ಪಿ – 21
ಬಿಜೆಪಿ – 8
ವೈಎಸ್‌ಆರ್‌ಸಿಪಿ – 12

2019ರಲ್ಲಿ ಏನಾಗಿತ್ತು?
ಆಂಧ್ರದಲ್ಲಿ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 151 ಸ್ಥಾನಗಳನ್ನು ಗೆದ್ದು ವೈಎಸ್‌ಆರ್‌ಸಿಪಿ ಅಧಿಕಾರ ಹಿಡಿದಿತ್ತು. ಟಿಡಿಪಿ 23 ಹಾಗೂ ಜೆಎನ್‌ಪಿ 1 ಸ್ಥಾನ ಗೆದ್ದಿತ್ತು. ಇದನ್ನೂ ಓದಿ: ಒಡಿಶಾದಲ್ಲಿ ಬಿಜೆಡಿ ಕೋಟೆ ಛಿದ್ರ – ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ

Share This Article