ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ – ಜೂ.9ರಂದು ಮೋದಿ ಪ್ರಮಾಣ ವಚನ ಸ್ವೀಕಾರ?

Public TV
1 Min Read
Narendra Modi JP Nadda

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ (Lok Sabha Election Result) ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ (New Delhi) ಎನ್‌ಡಿಎ (NDA) ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಮತದಾರ ಯಾರೂ ಊಹಿಸದ ತೀರ್ಪು ನೀಡಿದ್ದು, 400 ಪಾರ್ ನಿರೀಕ್ಷೆಯಲ್ಲಿದ್ದ ಎನ್‌ಡಿಎಗೆ ಬಿಗ್ ಶಾಕ್ ಉಂಟಾಗಿದೆ. ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಎಲ್ಲಾ ಮೈತ್ರಿ ನಾಯಕರನ್ನು ಆಹ್ವಾನಿಸಲಾಗಿದೆ. ಅಲ್ಲದೇ ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಯ ವೇಳೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರ ರಚನೆ, ಮುಂದಿನ ರಣತಂತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಮೊದಲ ಹಂತದಲ್ಲೇ ಬಿಜೆಪಿಗೆ ಭಾರೀ ಹಿನ್ನಡೆ – ಮಿಡಲ್‌ ಓವರ್‌ನಲ್ಲಿ ಹೆಚ್ಚು ಸ್ಕೋರ್‌ – ಯಾವ ಹಂತದಲ್ಲಿ ಯಾರಿಗೆ ಎಷ್ಟು ಸ್ಥಾನ?

ಇನ್ನೊಂದೆಡೆ ರಾಷ್ಟ್ರಪತಿ ಭವನದ ಸರ್ಕ್ಯೂಟ್-1ಕ್ಕೆ ಇಂದಿನಿಂದ ಜೂ.9ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿರುವುದಾಗಿ ರಾಷ್ಟ್ರತಿ ಭವನ ತಿಳಿಸಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಿದ್ಧತೆಯ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂ.9ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ: ದೇಶದ ಜನತೆಗೆ ಮೋದಿ ಕೃತಜ್ಞತೆ

Share This Article