Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಗಾ ಸಲಹೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಗಾ ಸಲಹೆ: ಡಿಕೆಶಿ

Bengaluru City

ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಗಾ ಸಲಹೆ: ಡಿಕೆಶಿ

Public TV
Last updated: June 7, 2024 5:34 pm
Public TV
Share
3 Min Read
DK Shivakumar 1 2
SHARE

ಬೆಂಗಳೂರು: ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಕಾಂಗ್ರೆಸ್‌ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ (Rahul Gandhi) ಅವರು ಸಲಹೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದರು. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

Rahul Gandhi 2

ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಂತರ ಕೆಲ ಸಚಿವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಅವರು, ಸಚಿವರ ಕ್ಷೇತ್ರದಲ್ಲಿ ಚುನಾವಣೆ ಫಲಿತಾಂಶ ಏನಾಯಿತು ಎಂದು ಚರ್ಚೆ ಮಾಡಿದರು. ರಾಜ್ಯದಲ್ಲಿ ಇನ್ನೂ 5-6 ಸೀಟುಗಳ ನಿರೀಕ್ಷೆ ಇತ್ತು. ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು. ಎಲ್ಲೆಲ್ಲಿ ಹಿನ್ನಡೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳಬೇಕು. ಮತ್ತೆ ಜನರ ಬಳಿಗೆ ಹೋಗಬೇಕು ಎಂದು ಜವಾಬ್ದಾರಿ ನೀಡಿದ್ದಾರೆ ಎಂದರು.

ಇನ್ನು ಎಲ್ಲ ನಾಯಕರ ಜೊತೆ ಚರ್ಚೆ ಮಾಡಿ ಕಾರ್ಯಸೂಚಿ ಸಿದ್ಧಪಡಿಸುವಂತೆ ನನಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಇನ್ನು ಶನಿವಾರ (ಜೂನ್ 8) ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಗೆ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದು, ಈ ಸಭೆಯಿಂದ ಮರಳಿದ ನಂತರ ಮುಂದಿನ ವಾರ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ನಮಗೆ ಶಕ್ತಿಯಾಗಿದ್ದು, ಖರ್ಗೆ ಅವರು 371ಜೆ ಮೂಲಕ ನಮಗೆ ಶಕ್ತಿ ತುಂಬಿದ್ದು, ಅದರಿಂದ 5ಕ್ಕೆ 5 ಕ್ಷೇತ್ರ ಗೆದ್ದಿದ್ದೇವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕಾರ್ಯಯೋಜನೆ ರೂಪಿಸುತ್ತೇವೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ನ್ಯಾಯಾಲಯ ಹಾಗೂ ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದು ತರಲಾಗಿದೆ ಎಂದರು.

ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಆರು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದು, ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

TAGGED:bengalurucongressDK ShivakumarRahul Gandhiಡಿಕೆ ಶಿವಕುಮಾರ್ಬೆಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
48 minutes ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
50 minutes ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
1 hour ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
2 hours ago
ABVP protests against Azim Premji University Bengaluru 2
Bengaluru City

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?