ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

Public TV
1 Min Read
Almatti Dam

ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

Almatti Dam

ಶುಕ್ರವಾರದಿಂದ (ಜೂ.8) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?

Almatti Dam 2

ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ:
ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: NCP ನಾಯಕ ಪ್ರಫುಲ್‌ ಪಟೇಲ್‌ಗೆ ಬಿಗ್‌ ರಿಲೀಫ್‌ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!

Share This Article