ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಬಗ್ಗೆ ಎಐಸಿಸಿ ಅಸಮಾಧಾನ – ತಲೆದಂಡದ ಸುದ್ದಿ ಅಲ್ಲಗಳೆದ ಸಚಿವರು

Public TV
1 Min Read
Mallikarjun Kharge

– ಅಧಿಕಾರದಲ್ಲಿದ್ರೂ ಹೆಚ್ಚಿನ ಸ್ಥಾನ ಗೆಲ್ಲಲಾಗಲಿಲ್ಲ: ರಾಜ್ಯ ಕಾಂಗ್ರೆಸ್ ವಿರುದ್ಧ ಖರ್ಗೆ ಗುಡುಗು

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ವಿಶೇಷವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ನಿರೀಕ್ಷೆ ಮಾಡಿದಷ್ಟು ಸ್ಥಾನಗಳನ್ನು ಗಳಿಸದ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಎದುರಲ್ಲೇ ಖರ್ಗೆಯವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ತೋರಿದ ಪ್ರದರ್ಶನ ಲೋಕಸಭೆಯಲ್ಲಿ ತೋರಲು ಆಗಲಿಲ್ಲ. ಅಧಿಕಾರದಲ್ಲಿದ್ದರೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲಾಗಲಿಲ್ಲ ಎಂದು ಖರ್ಗೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಹೆಚ್‍ಡಿಕೆಗೆ ಸಚಿವ ಸ್ಥಾನ ಫಿಕ್ಸ್?

ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi), ಸಚಿವರ ಸ್ವಕ್ಷೇತ್ರಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗಿರುವ ಬಗ್ಗೆ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ವರದಿಯನ್ನೂ ಕೇಳಿದ್ದರು. ಹೀಗಾಗಿ ಕೆಲ ಸಚಿವರ ತಲೆದಂಡ ಆಗಬಹುದು ಎಂಬ ಸುದ್ದಿಯೂ ಹಬ್ಬಿದೆ. ಆದರೆ ಈ ಸುದ್ದಿಯನ್ನು ರಾಜ್ಯದ ಸಚಿವರು ಅಲ್ಲಗಳೆದಿದ್ದಾರೆ.

ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದು ನಿಜ. ಆದರೆ ಸಚಿವರ ತಲೆದಂಡದ ಬಗ್ಗೆ ಎಲ್ಲೂ ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇದೇ ವಿಚಾರವಾಗಿ, ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಸಚಿವರ ಮೌಲ್ಯಮಾಪನದ ಬಗ್ಗೆ ಚರ್ಚೆ ನಡೆದಿಲ್ಲ. ಯಾಕೆ ಹಿನ್ನಡೆಯಾಗಿದೆ ಎಂದು ಅವರು ಕೇಳಿದ್ದಾರೆ. ಈ ಬಗ್ಗೆ ಪರಾಮರ್ಶೆ ಮಾಡುವುದಾಗಿ ಹೇಳಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಸಂಸದೀಯ ಪಕ್ಷದ ನಾಯಾಕಿಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ

Share This Article