‘ಪಠಾಣ್’ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಸದ್ಯ ದೀಪಿಕಾ ಮತ್ತು ಪ್ರಭಾಸ್ ನಟಿಸಿರುವ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಕೂಡ ರಿಲೀಸ್‌ಗೆ ಸಿದ್ಧವಾಗಿದೆ. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿಗೆ ರಿಷಬ್ ವಿಶ್

View this post on Instagram
ಜೂನ್ 10ರಂದು ಕಲ್ಕಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಪೋಸ್ಟರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಟ್ರೈಲರ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ, ನಿವೇದಿತಾ ಡಿವೋರ್ಸ್ ಬಗ್ಗೆ ರಾಗಿಣಿ ರಿಯಾಕ್ಷನ್
ಇನ್ನೂ ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲ್ಕಿ 2898 ಎಡಿ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್ (Prabhas), ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರವು ಜಗತ್ತಿನಾದ್ಯಂತ ಜೂನ್ 27ರಂದು ಬಿಡುಗಡೆ ಆಗಲಿದೆ.

