ಅರ್ಜುನ್ ಸರ್ಜಾ ಕುಟುಂಬದಲ್ಲಿ ಕಳೆಗಟ್ಟಿದ ಮಗಳ ಮದುವೆ ಸಂಭ್ರಮ

Public TV
1 Min Read
aishwarya arjun

ಹುಭಾಷಾ ನಟ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಜೂನ್ 10ರಂದು ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ (Umapathy Ramaiah) ಮದುವೆ ಜರುಗಲಿದೆ. ಸದ್ಯ ಹಳದಿ ಶಾಸ್ತ್ರ ಮತ್ತು ಮೆಹಂದಿ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಇದನ್ನೂ ಓದಿ:ಗುಟ್ಟಾಗಿ ಎಂಗೇಜ್‌ಮೆಂಟ್ ಮಾಡಿಕೊಂಡ ‘ಗಂಗೆ ಬಾರೆ ತುಂಗೆ ಬಾರೆ’ ನಟಿ

aishwarya sarja

ಅರ್ಜುನ್ ಸರ್ಜಾ ಪುತ್ರಿ ಹಳದಿ ಬಣ್ಣದ ಉಡುಗೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುವೆ ಸಂಭ್ರಮದಲ್ಲಿರುವ ಪುತ್ರಿಗೆ ಅರ್ಜುನ್ ಸರ್ಜಾ ಮುತ್ತು ಕೊಟ್ಟು ಮುದ್ದು ಮಾಡಿರೋದು ಎಲ್ಲರ ಗಮನ ಸೆಳೆದಿದೆ. ಐಶ್ವರ್ಯಾ ಮದುವೆ ಶಾಸ್ತ್ರದ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ರಜನಿಕಾಂತ್

aishwarya sarja 1

ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಈಗ ಜೂನ್ 10ಕ್ಕೆ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ನಟಿ ರೆಡಿಯಾಗಿದ್ದಾರೆ.

aishwarya arjun 1

ಜೂನ್ 10ರ ಮಗಳ ಮದುವೆಗೆ ಮತ್ತು ಜೂನ್ 14ರಂದು ನಡೆಯಲಿರುವ ಆರತಕ್ಷತೆಗೆ ಕನ್ನಡದ ಹೆಸರಾಂತ ನಟ ಜಗ್ಗೇಶ್ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ ಅರ್ಜುನ್ ಸರ್ಜಾ ದಂಪತಿ. ಸ್ಯಾಂಡಲ್‌ವುಡ್ ಮತ್ತು ಸೌತ್‌ನ ಅನೇಕ ನಟ, ನಟಿಯರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿರುವ ಗಣ್ಯರಿಗೆ ಮದುವೆ ಆಹ್ವಾನ ನೀಡಿದ್ದಾರೆ.

ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್‌ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.

Share This Article