ವಿನೋದ್ ರಾಜ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

Public TV
1 Min Read
vinod raj

ನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ಗೆ (Vinod Raj) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

Vinod Raj11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್‌ಗೆ (Heart Operation) ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಈ ಪರಿಣಾಮ, ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ.

ಅಂದಹಾಗೆ, ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

Share This Article