ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಡಿಕೆಶಿಗೆ ಇ.ಡಿ (ED) ನೀಡಿದ್ದ ಸಮನ್ಸ್ ಮಾನ್ಯವಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶ ಹೊರಡಿಸಿದೆ.
ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಪಿಎಂಎಲ್‌ಎ ಅಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿತು. ಈ ಹಿನ್ನೆಲೆ ಸಮನ್ಸ್ ಮಾನ್ಯವಲ್ಲ ಎಂದು ಆದೇಶ ನೀಡಿತು. ಇದನ್ನೂ ಓದಿ: ದರ್ಶನ್ ವಿರುದ್ಧ ರೌಡಿ ಶೀಟ್? – ಗೃಹಸಚಿವ ಪರಮೇಶ್ವರ್ ಹೇಳಿದ್ದೇನು?
ಈ ಮೊದಲು ಇ.ಡಿ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶವನ್ನು ಡಿಕೆಶಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಭವನ ನೌಕರ ಎ.ಹನುಮಂತಯ್ಯ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದನ್ನೂ ಓದಿ: ಕೆಪಿಸಿಎಲ್ ನೇಮಕಾತಿ ಪರೀಕ್ಷೆ – ಅಂತಿಮ ಅಂಕಪಟ್ಟಿ ಪ್ರಕಟ
ಏನಿದು ಪ್ರಕರಣ?: 2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. 2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!
ಡಿ.ಕೆ ಶಿವಕುಮಾರ್ 800 ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ರೂ. ಠೇವಣಿ ಇದೆ. 20ಕ್ಕೂ ಅಧಿಕ ಬ್ಯಾಂಕ್, 317ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಮೂಲಕ ಅಕ್ರಮ ಹಣ ವರ್ಗಾವಣೆ. ಮಗಳ ಹೆಸರಿನಲ್ಲಿ 108 ಕೋಟಿ ರೂ. ಅಕ್ರಮ ವ್ಯವಹಾರ ನಡೆಸಲಾಗಿದೆ. ಡಿಕೆಶಿ ಪುತ್ರಿಗೆ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ತಿಳಿಸಿಲ್ಲ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ದೆಹಲಿ ನಿವಾಸದ 8.59 ಕೋಟಿ ಹಣಕ್ಕೆ ಲೆಕ್ಕ ಕೊಟ್ಟಿಲ್ಲ. ಡಿ.ಕೆ ಶಿವಕುಮಾರ್ ಹೆಸರಲ್ಲಿ 24, ಸಂಸದ ಡಿಕೆ ಸುರೇಶ್ ಹೆಸರಲ್ಲಿ 27, ತಾಯಿ ಹೆಸರಲ್ಲಿ 38 ಆಸ್ತಿಗಳಿವೆ. ಡಿಕೆಶಿ ಕುಟುಂಬದ ಬಳಿ ಒಟ್ಟು 300 ಆಸ್ತಿಗಳಿವೆ. ಡಿ.ಕೆ ಶಿವಕುಮಾರ್ ವ್ಯವಹಾರದಲ್ಲಿ ಅಕ್ರಮ ಆಸ್ತಿ ಗಳಿಕೆ ಮತ್ತು ಹವಾಲ ದಂಧೆ ನಡೆದಿರುವ ಅನುಮಾನಗಳಿವೆ ಎಂದು ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಹೊರಿಸಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಅನ್ನೋದೇ ತಪ್ಪು: ಆರ್.ಅಶೋಕ್