Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೋಟಿ’ ಸಿನಿಮಾ ಪ್ರೀಮಿಯರ್‌ನಲ್ಲಿ ಸೆಲೆಬ್ರಿಟಿಗಳ ದಂಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕೋಟಿ’ ಸಿನಿಮಾ ಪ್ರೀಮಿಯರ್‌ನಲ್ಲಿ ಸೆಲೆಬ್ರಿಟಿಗಳ ದಂಡು

Cinema

‘ಕೋಟಿ’ ಸಿನಿಮಾ ಪ್ರೀಮಿಯರ್‌ನಲ್ಲಿ ಸೆಲೆಬ್ರಿಟಿಗಳ ದಂಡು

Public TV
Last updated: June 13, 2024 2:55 pm
Public TV
Share
3 Min Read
Kotee 3
SHARE

ಡಾಲಿ ಧನಂಜಯ (Daali Dhananjay) ಅಭಿನಯದ ‘ಕೋಟಿ’ (Kotee Film) ಸಿನಿಮಾದ ಪ್ರೀಮಿಯರ್ ಶೋ ಓರಾಯನ್ ಮಾಲ್‌ನಲ್ಲಿ ಜೂನ್ 12ರ ಸಂಜೆ ಅದ್ಧೂರಿಯಾಗಿ ನಡೆಯಿತು. ಇಡೀ ಟಿವಿ ಮತ್ತು ಚಿತ್ರರಂಗವೇ ಸಿನಿಮಾ ನೋಡಲು ಆಗಮಿಸಿತ್ತು. ಇದಕ್ಕೆ ಕಾರಣ ಚಿತ್ರದ ನಿರ್ದೇಶಕ ಪರಮ್. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರಿಗೆ ಕಿರುತೆರೆ ಮತ್ತು ಹಿರಿತೆರೆ ಎಲ್ಲೆಡೆ ಸ್ನೇಹಿತರಿದ್ದಾರೆ. ತಾರೆಗಳಿಗಾಗಿಯೇ ಎರಡು ಪ್ರೀಮಿಯರ್ ಶೋಗಳನ್ನು ಆಯೋಜಿಸಿದ್ದೆ ಇದಕ್ಕೆ ಸಾಕ್ಷಿ. ಸಾರ್ವಜನಿಕರಿಗೆ ಪೇಯ್ಡ್ ಪ್ರೀಮಿಯರ್ ಸೇರಿ ಓರಾಯನ್‌ನ ಮೂರು ಪರದೆಗಳು ಹೌಸ್‌ಫುಲ್ ಆಗಿದ್ದವು. ಸಾವಿರಕ್ಕಿಂತಲೂ ಹೆಚ್ಚು ಜನರು ಸಿನಿಮಾ ವೀಕ್ಷಿಸಿದರು.

Kotee 3

‘ಕೋಟಿ’ ಸಿನಿಮಾ ನೋಡಿದ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಧನಂಜಯ ಅವರ ಎಂಟ್ರಿಗೆ ಶಿಳ್ಳೆ, ಕೇಕೆಗಳು ಮುಗಿಲ ಮುಟ್ಟಿದ್ದವು. ಇಡೀ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ದೊರೆಯಿತು. ಸಿನಿಮಾದಲ್ಲಿ ಬರುವ ಒಂದು ಕ್ಯಾಮಿಯೋಗೆ ಇಡೀ ಚಿತ್ರಮಂದಿರವೇ ಹರ್ಷೋದ್ಗಾರ ಮಾಡಿದರೆ, ಕ್ಲೈಮ್ಯಾಕ್ಸ್ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸಿತ್ತು. ಸಿನಿಮಾ ಮುಗಿಯುತ್ತಿದ್ದಂತೆ ಮುಖ್ಯ ಪರದೆಯಲ್ಲಿ ಪ್ರೇಕ್ಷಕರೊಬ್ಬರು ಓಡಿ ಬಂದು ನಿರ್ದೇಶಕರನ್ನು ತಬ್ಬಿಕೊಂಡು ಹರ್ಷ ವ್ಯಕ್ತಪಡಿಸಿದರು. ಸಿನಿಮಾ ಮೆಚ್ಚಿದ ಟಿವಿ ಮತ್ತು ಸಿನಿಮಾ ಮಂದಿ ತಂಡಕ್ಕೆ ಶುಭ ಕೋರಿದರು.

Kotee

ಇನ್ನೂ ಕನ್ನಡ ಕಿರುತೆರೆ ಮತ್ತು ಹಿರಿತೆರೆಯ ನೂರಾರು ತಾರೆಗಳು ಪ್ರೀಮಿಯರ್ ಶೋಗೆ ಆಗಮಿಸಿ ಕಾರ್ಯಕ್ರಮಕ್ಕೆ ವಿಶೇಷ ರಂಗು ತಂದಿದ್ದರು. ಟಿ.ಎನ್ ಸೀತಾರಾಂ, ಹೇಮಂತ್ ರಾವ್, ಕಿರಣ್ ರಾಜ್, ಆರ್.ಚಂದ್ರು, ಸತೀಶ್ ನೀನಾಸಂ, ನವೀನ್ ಶಂಕರ್, ಮಂಜು ಪಾವಗಡ, ಬಿಗ್ ಬಾಸ್ ವಿನ್ನರ್ ಕಾರ್ತಿಕ್, ದಿವ್ಯಾ ಉರುಡುಗ (Divya Uruduga), ಅರವಿಂದ ಕೆ.ಪಿ, ಶೈನ್ ಶೆಟ್ಟಿ (Shine Shetty) ಸೇರಿ ಸುಮಾರು ಆರುನೂರಕ್ಕೂ ಅಧಿಕ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳು ಆಗಮಿಸಿದ್ದರು. ಮಾಧ್ಯಮ ಮಿತ್ರರಿಂದ ಕನ್ನಡ ಸಿನಿಮಾವೊಂದರ ಅತಿದೊಡ್ಡ ಪ್ರೀಮಿಯರ್ ಶೋ ಎಂಬ ಮಾತುಗಳು ಕೇಳಿಬಂದವು. ಇದನ್ನೂ ಓದಿ:‘ಕಲ್ಕಿ’ಯಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ದಿಶಾ ಪಟಾನಿ

 

View this post on Instagram

 

A post shared by Daali Dhananjaya (@dhananjaya_ka)

‘ಕೋಟಿ’ಯ ಬುಕಿಂಗ್ಸ್ ಈಗ ಓಪನ್ ಆಗಿದ್ದು ಜೂನ್ 13ರಂದು ಮೈಸೂರು ಮತ್ತು ಶಿವಮೊಗ್ಗದಲ್ಲಿ ಪ್ರೀಮಿಯರ್ ಶೋ ನಡೆಯಲಿದೆ. ಧನಂಜಯ್ ಮತ್ತು ಸಿನಿಮಾ ತಂಡ ಮೈಸೂರಿನ ಸಿನಿಪ್ರೇಮಿಗಳ ಜೊತೆ ‘ಕೋಟಿ’ ಸಿನಿಮಾ ನೋಡಲಿದೆ. ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

Kotee 1

ಸಾಕಷ್ಟು ಸದ್ದು ಮಾಡುತ್ತಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಸೋತಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ. ‘ಕೋಟಿ’ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

Kotee 2

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ‘777 ಚಾರ್ಲಿ’ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ‘ಕಾಂತಾರ’ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. ಜೂನ್ 14ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಚಿತ್ರ ಬಿಡುಗಡೆಯಾಗಲಿದೆ.

TAGGED:daali dhananjaykotee filmsandalwoodಕೋಟಿ ಸಿನಿಮಾಡಾಲಿ ಧನಂಜಯ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
36 minutes ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
38 minutes ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
43 minutes ago
kalaburagi student
Crime

ಶಾಲಾ ಆವರಣದ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
47 minutes ago
Raichuru Water Protest
Districts

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Public TV
By Public TV
1 hour ago
siddu dkshi
Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?