ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಏರ್ಪೋರ್ಟ್ ಬಳಿ ಅದ್ದೂರಿ ಸ್ವಾಗತ

Public TV
1 Min Read
h.d.kumaraswamy bengaluru airport 1

ಚಿಕ್ಕಬಳ್ಳಾಪುರ: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ಬಳಿ ಅದ್ದೂರಿ ಸ್ವಾಗತ ಕೋರಲಾಯಿತು.

ವಿಮಾನ ನಿಲ್ದಾಣದ ಬಿವಿಐಪಿ ಲಾಂಚ್‌ನಿಂದ ಕುಮಾರಸ್ವಾಮಿ ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು. ಹೂ ಮಾಲೆ ಹಾಕಿ, ಪುಷ್ಪ ಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು. ಈ ವೇಳೆ ಸ್ಥಳದಲ್ಲಿ ತಳ್ಳಾಟ ನೂಕಾಟವಾಯಿತು. ಇದನ್ನೂ ಓದಿ: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ

h.d.kumaraswamy bengaluru airport

ಸಿಐಎಸ್ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಹೊರಟ ಕುಮಾರಸ್ವಾಮಿ ಅವರಿಗೆ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು.

ಜೆಸಿಬಿ ಹಾಗೂ ಕ್ರೇನ್‌ಗಳ ಮೂಲಕ ಬೃಹತ್ ಸೇಬಿನ ಹಾರ ಹೂಮಾಲೆ ಹಾಕಿ ನಾಯಕನನ್ನು ಸ್ವಾಗತಿಸಿದರು. ಇದನ್ನೂ ಓದಿ: ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೇ ಬಿಎಸ್‌ವೈ ಮೇಲೆ ರಾಜಕೀಯ ವೈಷಮ್ಯ: ಜೋಶಿ ಆಕ್ರೋಶ

Share This Article