ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್ ಗ್ಯಾಂಗ್‍ನ ಮತ್ತಿಬ್ಬರು ಅರೆಸ್ಟ್

Public TV
1 Min Read
2 more arrested in Renukaswamy murder case

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಆರೋಪಿ ದರ್ಶನ್ (Darshan) ಗ್ಯಾಂಗ್‍ನ ಮತ್ತಿಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿದ್ದ ಎ6 ಜಗ್ಗ ಅಲಿಯಾಸ್ ಜಗದೀಶ್ ಹಾಗೂ ಎ7 ಅನಿ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲಿಸರು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಕೋಳಿ ಎಸೆದಂತೆ ಎಸೆದು ಟ್ರಕ್‌ಗೆ ಗುದ್ದಿ, ಸಿಕ್ಕ ಸಿಕ್ಕ ವಸ್ತುಗಳಲ್ಲಿ ಹೊಡೆದು ಹತ್ಯೆ

ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣದಲ್ಲಿ ದರ್ಶನ್, ಗೆಳತಿ ಪವಿತ್ರಾ (Pavithra Gowda) ಗೌಡ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ವಿಚಾರಣೆ ನಡೆಯುತ್ತಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ, ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ಅವರನ್ನು ಅಪಹರಿಸಿ ರೇಣುಕಾಸ್ವಾಮಿ ಅವರನ್ನು ಜೂನ್ 9 ಭಾನುವಾರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಬಂಧಿಸಲಾಗಿತ್ತು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನ 8ನೇ ಆರೋಪಿ ಶರಣಾಗತಿ – ದರ್ಶನ್‌ಗೆ ಕಾರು ಕೊಟ್ಟಿದ್ದವರಿಗೂ ಸಂಕಷ್ಟ!

Share This Article