ರಾಹುಲ್ ಗಾಂಧಿ ಬಿಳಿ ಬಣ್ಣದ ಟೀ ಶರ್ಟ್ ಧರಿಸೋ ಹಿಂದಿನ ಸೀಕ್ರೆಟ್ ರಿವೀಲ್

Public TV
1 Min Read
RAHUL GANDHI 1

ನವದೆಹಲಿ: ತಮ್ಮ ಜನ್ಮ ದಿನದ ಹೊತ್ತಲ್ಲೇ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರು (Rahul Gandhi) ತಾವು ಯಾವಾಗಲೂ ಧರಿಸುವ ಬಿಳಿ ಬಣ್ಣದ ಟೀ ಶರ್ಟ್‌ ಹಿಂದಿನ ಸೀಕ್ರೆಟ್‌ ರಿವೀಲ್‌ ಮಾಡಿದ್ದಾರೆ.

ಹೌದು. ರಾಗಾ ಅವರು ಬುಧವಾರ ತಮ್ಮ 54 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿ ಕಾರ್ಜುನ್‌ ಖರ್ಗೆ ಅವರು ಕೇಕ್‌ ಕಟ್‌ ಮಾಡಿಸುವ ಮೂಲಕ ರಾಹುಲ್‌ ಗಾಂಧಿಯವರ ಬರ್ತ್‌ ಡೇಯನ್ನು ಆಚರಿಸಲಾಯಿತು. ಈ ಬೆನ್ನಲ್ಲೇ ರಾಹುಲ್‌ ಗಾಂಧಿಯವರು #WhiteTshirtArmy ಎಂಬ ಅಭಿಯಾನವನ್ನು ಕೂಡ ಆರಂಭಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ನಿಮಗೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. ಇದೇ ವೇಳೆ ಬಿಳಿ ಶರ್ಟ್‌ ಕುರಿತು ಕೂಡ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸೋ ಮೋದಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗ್ತಿಲ್ಲ: ರಾಗಾ ವ್ಯಂಗ್ಯ

ನಾನು ಯಾವಾಗಲೂ ‘ಬಿಳಿ ಟಿ-ಶರ್ಟ್’ ಅನ್ನು ಏಕೆ ಧರಿಸುತ್ತೇನೆ ಎಂದು ಜನರು ಆಗಾಗ ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಟಿ-ಶರ್ಟ್ ನನಗೆ ಪಾರದರ್ಶಕತೆ, ಘನತೆ ಮತ್ತು ಸರಳತೆಯನ್ನು ಸಂಕೇತಿಸುತ್ತದೆ. ಹೀಗಾಗಿ ನಾನು ಹೆಚ್ಚಾಗಿ ಬಿಳಿ ಬಣ್ಣದ ಟೀ-ಶರ್ಟ್‌ಗಳನ್ನೇ ಧರಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ಅಲ್ಲದೇ #WhiteTshirtArmy ಬಳಸಿ ಮತ್ತು ವೀಡಿಯೋ ಮಾಡುವ ಮೂಲಕ ನನಗೆ ತಿಳಿಸಿ. ನಾನು ನಿಮಗೆ ಬಿಳಿ ಟಿ-ಶರ್ಟ್ ಅನ್ನು ಉಡುಗೊರೆಯಾಗಿ ನೀಡುತ್ತೇನೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

1970 ರ ಜೂನ್ 19 ರಂದು ಜನಿಸಿದ ರಾಹುಲ್ ಗಾಂಧಿ ಅವರು 5 ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ. 2004 ರಲ್ಲಿ ರಾಜಕೀಯ ಪ್ರವೇಶಿಸಿದ ರಾಗಾ, ಉತ್ತರ ಪ್ರದೇಶದ ಅಮೇಥಿಯಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. 2022 ರ ಸೆಪ್ಟೆಂಬರ್‌ ನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,080 ಕಿಮೀ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದರು.

Share This Article