ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಬಹುತೇಕ ಖಚಿತವಾಗಿದ್ದು, 7ನೇ ವೇತನ ಆಯೋಗದ (7th Pay Commission) ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ. ವೇತನ ಆಯೋಗ ಜಾರಿ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಚರ್ಚೆ ನಡೆದಿದೆ ಎಂಬುದು ಮೂಲಗಳ ಮಾಹಿತಿ.
25% ರಷ್ಟು ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದರೆ, 27% ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದ್ದು, 27% ವೇತನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಅಂತಿಮವಾಗಿ ವೇತನ ಆಯೋಗ ಜಾರಿ ಜವಾಬ್ದಾರಿಯನ್ನು ಸಿಎಂಗೆ ನೀಡಿದ್ದು, ಈ ತಿಂಗಳ ಅಂತ್ಯದೊಳಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಗ್ಯಾರಂಟಿಗಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ: ಸಿಎಂ
ಅಂದಹಾಗೆ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16 ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಒಂದು ವೇಳೆ ಸರ್ಕಾರ ಅಂತಿಮ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಿದರೆ ಮಾತ್ರ ಸರ್ಕಾರಿ ನೌಕರರ ಕನಿಷ್ಠ ವೇತನವು ತಿಂಗಳಿಗೆ 17,000 ರಿಂದ 27,000ಕ್ಕೆ ಏರುತ್ತದೆ. ಇದನ್ನೂ ಓದಿ: ರಾಹುಲ್ ಗಾಂಧಿ ಬಿಳಿ ಬಣ್ಣದ ಟೀ ಶರ್ಟ್ ಧರಿಸೋ ಹಿಂದಿನ ಸೀಕ್ರೆಟ್ ರಿವೀಲ್