ದರ್ಶನ್‌, ಪ್ರಜ್ವಲ್‌ ರೇವಣ್ಣ, ಯಡಿಯೂರಪ್ಪ, ಸೂರಜ್‌ ವಿರುದ್ಧ ನಟಿ ರಮ್ಯಾ ಕೆಂಡ

Public TV
2 Min Read
RAMYA

– ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು ಎಂದು ನಟಿ ವಾಗ್ದಾಳಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ (Ramya) ಕೆಂಡ ಕಾರಿದ್ದಾರೆ.

ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಬಂಧನವಾಗಿರೋ ಆರೋಪಿಗಳ ಕುಟುಂಬದ ಸ್ಥಿತಿ ಶೋಚನೀಯ!

darshan yediyurappa prajwal revanna suraj revanna

ರಮ್ಯಾ ಪೋಸ್ಟ್‌ನಲ್ಲೇನಿದೆ?
ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ನಟಿ ರಮ್ಯಾ ಪೋಸ್ಟ್‌ ಮಾಡಿದ್ದಾರೆ.

ರಮ್ಯಾ ತಮ್ಮ ಪೋಸ್ಟ್‌ ಜೊತೆಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ನಟ ದರ್ಶನ್‌, ಮಾಜಿ ಸಿಎಂ ಯಡಿಯೂರಪ್ಪ, ಎಂಎಲ್‌ಸಿ ಸೂರಜ್‌ ರೇವಣ್ಣ ಅವರ ಹೆಸರನ್ನು ಹ್ಯಾಶ್‌ ಟ್ಯಾಗ್‌ ಮೂಲಕ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್‌ ರೇವಣ್ಣ (Prajwal Revanna) ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಇವರ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದೆಲ್ಲದರ ಜೊತೆಗೆ ಈಗ ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪುತ್ರ ಸೂರಜ್‌ ರೇವಣ್ಣ (Suraj Revanna) ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

Share This Article