ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬೊಮ್ಮಾಯಿ

Public TV
2 Min Read
Basavaraj Bommai 1

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಬರೀ ಕುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಕುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

saleem ahmed

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರ ಬೀಳುತ್ತದೆ ಎಂದು‌ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ-ಮಂತ್ರಿಗಳ ನಡುವೆ ಏನಾಗುತ್ತದೆ..? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ ಎಂದು ತಿಳಿದುಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು, ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೋ ನನಗೆ ಗೊತ್ತಿಲ್ಲ. ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಬೊಮ್ಮಾಯಿ ಹೇಳಿದರು.

ಶಾಸಕರಿಗೆ ನೀಡುವ ಭತ್ಯೆ ಚಹಾ ಕುಡಿಯಲಿಕ್ಕೆ ಸಾಲಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

ಡೆಂಗ್ಯೂ ಮುನ್ನೆಚ್ಚರಿಕೆ ವಹಿಸಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಹಾವಳಿ ಕುರಿತು ಮಾತನಾಡಿದ ಅವರು, ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೇಗೆ ಬಂದಿತ್ತೊ ಹಾಗೆ ಈಗ ಡೆಂಗ್ಯೂ ಬಂದಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಬೇಕು. ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವುದಿಲ್ಲ. ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ. ಆಗ ಮೇಲಾಧಿಕಾರಿಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ, ಡಿ.ಎಸ್ ಗೆ ಆಗ್ರಹ ಮಾಡುತ್ತೇನೆ. ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಬೊಮ್ಮಾಯಿ ಎಂದರು.

Dengue

ಡೆಂಗ್ಯೂ ಡೇತ್ ಕೇಸ್ ಮರೆಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಗ್ಯೂ ಸೋಂಕಿತರು ಹುಬ್ಬಳ್ಳಿ ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Share This Article