3 ತಿಂಗಳಲ್ಲಿ ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಕೆಲಸ ಮುಗಿಬೇಕು: ಶರಣಪ್ರಕಾಶ್ ಪಾಟೀಲ್ ತಾಕೀತು

Public TV
1 Min Read
SHARANAPRAKASH PATIL

ಮಂಡ್ಯ: ಮಿಮ್ಸ್ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ (Cancer Hospital) ಕಾಮಗಾರಿಗಳು 3 ತಿಂಗಳೊಳಗಾಗಿ ಪೂರ್ಣಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಆರ್ ಪಾಟೀಲ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಮಂಡ್ಯದ ಮಿಮ್ಸ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಪಾಟೀಲ್, ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸವೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊರ ಗುತ್ತಿಗೆ ಮೇಲೆ ಲ್ಯಾಬ್ ಸೇವೆ ಒದಗಿಸುತ್ತಿರುವ ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೆಚ್ಚಿನ ದರ ವಿದಿಸುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸಿ ತಪ್ಪು ಕಂಡುಬಂದಲ್ಲಿ ಟೆಂಡರ್ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

Share This Article