ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ (H Vishwanath) ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಂಭಾಗ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣ ಕುರಿತು ಮಾತನಾಡಿದರು. ಸಿಎಂ ತಮಗೆ 62 ಕೋಟಿ ರೂ. ಬರಬೇಕು ಅಂತಾರೆ. ನನಗೆ ಅರ್ಥವಾಗ್ತಿಲ್ಲ, ಇದು ಯಾವ ಥರ ಲೆಕ್ಕಚಾರ ಅಂತಾ? ಹಣಕಾಸು ಸಚಿವರಾದರು ಹೀಗೆ ಮಾತಾಡಿದ್ರೆ ಹೇಗೆ? ಯಾಕೆ ಸಿದ್ದರಾಮಯ್ಯ (Siddaramaiah) ಮಣ್ಣಿನ ಹಿಂದೆ ಹೋಗ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ ರೀತಿ ಬದಲಾವಣೆ ಆದ್ರು?. ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್ ಆದ್ರು ಜನ ಸಾಮಾನ್ಯರಿಗೆ ಕೊಡಿಸಿದ್ದಿರಾ?. ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು. ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿನೋಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರು. ದಾನ ಪತ್ರವಾಗಿ 2010 ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ ಎಂದರು. ಇದನ್ನೂ ಓದಿ: ಹತ್ರಾಸ್ ದುರಂತ- ಪರಿಹಾರದ ಮೊತ್ತ ಹೆಚ್ಚಿಸಲು ರಾಹುಲ್ ಗಾಂಧಿ ಒತ್ತಾಯ
ಸಿಎಂ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಟ್ಟು ಆ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ?. ಈ ಹಗರಣ ನ್ಯಾಯಾಂಗ ತನಿಖೆ ಗೆ ಒಪ್ಪಿಸಿ ಅಂತಾ ನಿಮ್ಮ ಶಿಷ್ಯರು ಸಲಹೆ ಕೊಡ್ತಾ ಇದ್ದಾರೆ. ನ್ಯಾಯಾಂಗ ತನಿಖೆ ಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐ ಗೆ ಕೊಡಿ. ಸಾವಿರಾರು ಕೋಟಿ ರೂ ಹಗರಣ ಇದು ಎಂದು ಹೆಚ್. ವಿಶ್ವನಾಥ್ ಆಗ್ರಹ ಮಾಡಿದರು.
ಪ್ರಾಧಿಕಾರದ ಆಯುಕ್ತರನ್ನು ವರ್ಗಾವಣೆ ಮಾಡಿ ಇಲ್ಲೆ ಯಾಕೆ ಇಟ್ಟು ಕೊಂಡಿದ್ದಿರಿ?. ಇನ್ನೂ ನಿಮ್ಮ ಕೆಲಸ ಇಲ್ಲಿ ಮುಗಿದಿಲ್ಲ. ಸಿಎಂ ಗೆ 62 ಕೋಟಿ ರೂ. ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಾಗ್ದಾಳಿ ನಡೆಸಿದರು.