ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್‌ವೊಂದರ (Pub) ಮೇಲೆ ಎಫ್‌ಐಆರ್ ದಾಖಲಾಗಿದೆ.
ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಪಬ್, ಟಾನಿಕ್ ಬಿಲ್ಡಿಂಗ್‌ನ ಕೊನೆಯ ಮಹಡಿಯಲ್ಲಿದೆ. ಇದನ್ನೂ ಓದಿ: ಮುಡಾ ಭ್ರಷ್ಟಾಚಾರ ಪ್ರಕರಣ – ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಜುಲೈ 6 ರಂದು ರಾತ್ರಿ 1:20 ರ ವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಉಪ ಪೊಲೀಸ್ ಆಯುಕ್ತ (ಕೇಂದ್ರ) ಶೇಖರ್ ಹೆಚ್.ತೆಕ್ಕಣ್ಣನವರ್ ಮಾತನಾಡಿ, ನಾವು ಕಳೆದ ರಾತ್ರಿ 1:30 ರವರೆಗೆ ತೆರೆದಿರುವಂತೆ ಸುಮಾರು 3-4 ಪಬ್‌ಗಳನ್ನು ಕಾಯ್ದಿರಿಸಿದ್ದೇವೆ. ಜೋರಾಗಿ ಸಂಗೀತವನ್ನು ನುಡಿಸಲಾಗುತ್ತಿದೆ ಎಂಬ ದೂರುಗಳನ್ನು ನಾವು ಸ್ವೀಕರಿಸಿದ್ದೇವೆ. ಪಬ್‌ಗಳು ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ತೆರೆದಿರಲು ಅನುಮತಿಸಲಾಗಿದೆ. ಈ ಅವಧಿ ಮೀರಿ ತೆರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು