ಮಂಡ್ಯದಲ್ಲಿ ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಅಂದರ್‌!

Public TV
2 Min Read
Mobile

ಮಂಡ್ಯ: ತನ್ನ ಬಳಿ ಕ್ರೀಡೆ ಹಾಗೂ ಚಿತ್ರಕಲೆ (Sports, Painting) ಕಲಿಯಲು ಬರುತ್ತಿದ್ದ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬನನ್ನು ಪೊಲೀಸರು (Mandya Police) ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಲೂಕಿನ ಅಮೃತಹಳ್ಳಿಯ ಯೋಗಿ ಬಂಧಿತ ಆರೋಪಿಯಾಗಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೂ ಎಸಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ರಾಜಪ್ಪ ಮೇಸ್ಟ್ರು ಶಾಲೆಗೆ ಸೇರಿಸದಿದ್ದರೆ ನಾನು ಸಿಎಂ ಆಗ್ತಿರಲಿಲ್ಲ

mobile video

ಈ ಸಂಬಂಧ ನಾಲ್ವರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ (Child Rights Protection Unit) ಕಾನೂನು ಪರಿವೀಕ್ಷಣಾಧಿಕಾರಿ ಎಸ್‌.ಎಂ. ಶೈಲಜಾ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15 ರಿಂದ 17 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು

Mobile phone video

ಆಸಾಮಿ ತಗಲಾಕ್ಕೊಂಡಿದ್ದು ಹೇಗೆ?
ಆರೋಪಿ ಯೋಗಿ ವಿದ್ಯಾರ್ಥಿನಿಯರು ಸಂತ್ರಸ್ತ ವಿದ್ಯಾರ್ಥಿನಿಯರು ಓದುತ್ತಿದ್ದ ಪ್ರೌಢಶಾಲೆಯಲ್ಲೇ ಹಳೆಯ ವಿದ್ಯಾರ್ಥಿಯಾಗಿದ್ದ. ಶಾಲೆ ಸಮೀಪದಲ್ಲೇ ಸ್ವಂತ ತರಬೇತಿ ಕೇಂದ್ರ ನಡೆಸುತ್ತಿದ್ದ. ಕೆಲ ವಿದ್ಯಾರ್ಥಿನಿಯರಿಗೆ ಕ್ರೀಡೆ, ಚಿತ್ರಕಲೆಯಲ್ಲಿ ಆಸಕ್ತಿ, ಇದ್ದ ಕಾರಣ, ತರಬೇತಿಗೆ ಸೇರಿಕೊಂಡಿದ್ದರು. ತನ್ನ ಬಳಿ ಬರುವ ವಿದ್ಯಾರ್ಥಿನಿಯರಿಗೆ ಮೊದಲು ಅಣ್ಣನಂತೆ ನಾಟಕವಾಡಿ ನಂಬಿಸುತ್ತಿದ್ದ.

ತರಬೇತಿ ಕೇಂದ್ರದ ಪಿಟಿ ರೂಮಿನಲ್ಲೇ ಇರುತ್ತಿದ್ದ ಈತ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ತನ್ನ ಮೊಬೈಲ್‌ನಿಂದ ಬೆತ್ತಲೆ, ಅರೆಬೆತ್ತಲೆ ಫೋಟೋಗಳನ್ನು ತೆಗೆದು, ಪೋಷಕರಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದ. ತನ್ನೊಂದಿಗೆ ಮಲಗುವಂತೆ ಬಲವಂತ ಮಾಡುತ್ತಿದ್ದ. ತರಬೇತಿ ನೀಡುವ ವೇಳೆ ಕೆಟ್ಟದ್ದಾಗಿ ವರ್ತಿಸುತ್ತಿದ್ದ. ಒಂದೊಮ್ಮೆ ಅದೇ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಐಸ್‌ಕ್ರೀಮ್‌ ಕೊಡಿಸಿ, ಪ್ರಜ್ಞೆ ತಪ್ಪಿಸುವಂತೆ ಮಾಡಿದ್ದ. ಬಳಿಕ ಆಕೆಯ ಬೆತ್ತಲೆ ಫೋಟೋ ಕ್ಲಿಕ್ಕಿಸಿ, ನೀನು ನನ್ನೊಂದಿಗೆ ಮಲಗದಿದ್ದರೆ, ನಿಮ್ಮ ಪೋಷಕರಿಗೆ ಫೋಟೋ ತೋರಿಸುವುದಾಗಿ ಬೆದರಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕಕ್ಕೆ ವಿದ್ಯಾರ್ಥಿನಿಯರು ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಬಳಿಕ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಪೊಲೀಸ್‌ ಠಾಣೆಗೆ ನೀಡಿದ ದೂರಿನ ಮೇಲೆ ಯೋಗಿ ಎಂಬಾತನನ್ನ ಬಂಧಿಸಿ, ಎಫ್‌ಐಆರ್‌ ದಾಖಲಾಗಿದೆ. ಪೋಕ್ಸೋ ಕೇಸ್‌ ಜೊತೆಗೆ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್‌ 354 ಎ, 354 ಡಿ, 509 ಅಡಿಯಲ್ಲಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

Share This Article