ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಇಡಿ ವಶಕ್ಕೆ ಪಡೆದಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಜಾರಿ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿತು. ಬಳಿಕ ಮಾಜಿ ಸಚಿವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ವಿಜಯೇಂದ್ರ
- Advertisement
ಬಳಿಕ ಶಾಂತಿನಗರ ಇಡಿ ಕಚೇರಿಗೆ ಕರೆತಂದಿದ್ದಾರೆ. ಇತ್ತ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಇಡಿ ತಂಡ ಹೋಗಿದೆ ಎನ್ನಲಾಗಿದೆ.
- Advertisement
ಬುಧವಾರವಷ್ಟೇ ನಾಗೇಂದ್ರ, ದದ್ದಲ್ ಅವರ ಆಪ್ತರು ಹಾಗೂ ಇತರ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ದುರ್ಮರಣ