ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

Public TV
3 Min Read
Amit Shah

ನವದೆಹಲಿ: ಪ್ರತಿವರ್ಷ ಜೂನ್‌ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್‌ʼ (Samvidhaan Hatya Diwas) ಆಗಿ ಆಚರಿಸಲಾಗುವುದು ಎಂದು ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ (Emergency Day) ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಮಿತ್‌ ಶಾ ಅವರಿಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಸುತ್ತೋಲೆ ಪ್ರತಿಯನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜು.15ರಿಂದ ವಿಧಾನಸಭೆ ಅಧಿವೇಶನ ಶುರು; ವಿಧಾನಸೌಧ ವಾಸ್ತುಪ್ರಕಾರವಾಗಿಯೇ ಇದೆ ಎಂದ ಹೊರಟ್ಟಿ

emergency 1975

ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು:
ಪ್ರತಿ ವರ್ಷ ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 1975ರ ಜೂನ್ 25 ರಂದು, ಅಂದಿನ ಪ್ರಧಾನಿ ಇಂದಿರಾಗಾಂಧಿ  (Indira Gandhi) ಸರ್ವಾಧಿಕಾರಿ ಮನಸ್ಥಿತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು. ಯಾವುದೇ ತಪ್ಪಿಲ್ಲದೇ ಲಕ್ಷಾಂತರ ಜನರನ್ನ ಕಂಬಿಯ ಹಿಂದೆ ಎಸೆಯಲಾಯಿತು. ಮಾಧ್ಯಮಗಳ ಧ್ವನಿಯನ್ನು ಮೌನಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದ್ದಾರೆ.

Modi 3

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೋದಿಯಿಂದಲೂ ವಾಗ್ದಾಳಿ:
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತುಪರಿಸ್ಥಿತಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷವು (Congress Party) ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಬುಡಮೇಲು ಮಾಡಿತ್ತು? ಹಾಗೂ ಪ್ರತಿಯೊಬ್ಬ ಭಾರತೀಯರು ಗೌರವಿಸುವ ಸಂವಿಧಾನವನ್ನು (Constitution Of India) ಹೇಗೆ ತುಳಿಯಿತು? ಎಂಬುದನ್ನು ನಮಗೆ ನೆನಪಿಸುತ್ತದೆ. ಅಸಂಖ್ಯಾತ ಸಂದರ್ಭಗಳಲ್ಲಿ 356ನೇ ವಿಧಿ ಹೇರಿದವರು, ಪತ್ರಿಕಾ ಸ್ವಾತಂತ್ರ್ಯ ನಾಶಮಾಡುವ ಮಸೂದೆಯನ್ನು ಪಡೆದವರು, ಫೆಡರಲಿಸಂ ಅನ್ನು ನಾಶಪಡಿಸಿದರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದವರು ಇದೇ ಜನರು.

ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರ ಮನೋಭಾವವನ್ನು ಮರೆಮಾಚುತ್ತಾರೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಆದ್ರೆ ದೇಶದ ಜನರು ಅವರ ಭಾವನೆಗಳನ್ನು ವರ್ತನೆಗಳ ಮೂಲಕ ನೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನ ತಿರಸ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದರು. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

ತುರ್ತುಪರಿಸ್ಥಿತಿ ಕರಾಳ ನೆನಪು:
ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್‌ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ (Indira Gandhi) ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಕಳೆದ ಜೂನ್‌ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಅಮಿತ್‌ ಶಾ ಅವರು, ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವಂತೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

Share This Article