Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

Cinema

ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

Public TV
Last updated: July 17, 2024 11:11 am
Public TV
Share
3 Min Read
chandan shetty
SHARE

ಈಗಾಗಲೇ ಟೀಸರ್, ಹಾಡುಗಳು ಮತ್ತು ಎರಡು ಟ್ರೈಲರ್‌ನಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Film) ಚಿತ್ರವು ಇದೇ ಶುಕ್ರವಾರ (ಜು.19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿತ್ತು. ಈ ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

FotoJet 42

ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Movies ಮಮತಾ ಸೆಂಧಿಲ್, ಅಮರ್, ಮನೋಜ್, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು. ಇದನ್ನೂ ಓದಿ:‘ಘಟಶ್ರಾದ್ಧ’ ಚಿತ್ರದ ನಿರ್ಮಾಪಕ ಸದಾನಂದ ಸುವರ್ಣ ನಿಧನ

FotoJet 2 17

ಈ ಸಂದರ್ಭದಲ್ಲಿ ಮಾತನಾಡಿದ ಚಂದನ್ ಶೆಟ್ಟಿ, ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ? ನನ್ನ ಅಭಿನಯ ಇಷ್ಟವಾಗುತ್ತದಾ? ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾನು ಹೀರೋ ಎನ್ನುವುದಕ್ಕಿಂತ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್ ಪ್ರಮುಖ ಪಾತ್ರಧಾರಿಗಳು. ಅವರೆಲ್ಲಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈ ಚಿತ್ರದ ನಿಜವಾದ ಹೀರೋ ನಿರ್ದೇಶಕರು. ಒಂದೊಳ್ಳೆಯ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಮಕ್ಕಳು ಮತ್ತು ಅವರ ಪೋಷಕರು ಇಬ್ಬರೂ ಕೂತು ಒಟ್ಟಿಗೆ ನೋಡುವಂಥ ಚಿತ್ರ ಇದು. ಎಲ್ಲರೂ ಬಂದು ಚಿತ್ರ ನೋಡಿ ಎಂದರು.

FotoJet 1 26

ಅರುಣ್ ಅಮುಕ್ತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮಗೆ ಯಾವ ಅಭಿಮಾನಿಗಳಿಲ್ಲ. ನಮ್ಮ ಚಿತ್ರ ನೋಡುವುದಕ್ಕೆ ಬರುವವರೇನಿದ್ದರೂ ಟ್ರೈಲರ್‌ ಮತ್ತು ಹಾಡುಗಳನ್ನು ನೋಡಿ ಬರಬೇಕು. ನಮ್ಮ ಪ್ರೇಕ್ಷಕರೇನಿದ್ದರೂ ಇವತ್ತಿನ ಯುವಜನತೆ. ಅವರಿಗೆ ಚಿತ್ರ ತಲುಪಿಸಬೇಕು. ಹೇಗೆ ತಲುಪಿಸಬೇಕು ಎಂಬುದರ ಕುರಿತು ನನಗೆ ಕೆಲವು ಯೋಚನೆಗಳಿದ್ದವು. ಹಾಗಾಗಿ, ನಾನೇ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾದೆ. ಸುಮಾರು 140 ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರದ ಟ್ರೈಲರ್‌ ಮತ್ತು ಹಾಡು ನೋಡಿ, ಕೆಲವು ಚಿತ್ರಮಂದಿರದವರು ಕರೆದು ಚಿತ್ರ ಪ್ರದರ್ಶಿಸುವ ಅವಕಾಶ ಕೊಟ್ಟಿದ್ದಾರೆ. ಆಮೇಲೆ ನೋಡೋಣ ಎಂದು ಕಾಯದೇ ಮೊದಲ ದಿನವೇ ಬಂದು ಚಿತ್ರ ನೋಡಿ’ ಎಂದು ಕರೆನೀಡಿದರು.

chandan shetty 1

ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಮಮತಾ ಸೆಂಧಿಲ್ ಮಾತನಾಡಿ, ಇದಕ್ಕೂ ಮುನ್ನ ‘ಕಾಟೇರ’ ಚಿತ್ರವನ್ನು ಬಿಡಗುಡೆ ಮಾಡಿದ್ದೆವು. ಇದು ನಮ್ಮ ಎರಡನೆಯ ಚಿತ್ರ. ನೋಡಿದವರೆಲ್ಲರೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬೇರೆ ದೇಶಗಳಲ್ಲೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಅಲ್ಲಿನ ಕನ್ನಡಿಗರು ಕೇಳುತ್ತಿದ್ದು, ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಮುಂತಾದ ಕಡೆ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದರು.

chandan shetty 2

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವನ್ನು ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸಿದ್ದಾರೆ. ತಮ್ಮ ಮೊದಲ ಪ್ರಯತ್ನಕ್ಕೆ ಕನ್ನಡಿಗರ ಪ್ರೋತ್ಸಾಹ, ಬೆಂಬಲವಿರಲಿ ಎಂದು ನಿರ್ಮಾಪಕರು ಇದೇ ಸಂದರ್ಭದಲ್ಲಿ ಕೇಳಿಕೊಂಡರು.

ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ಅಮರ್, ಮನೋಜ್, ಮನಸ್ವಿ ಮುಂತಾದವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಚಿತ್ರವನ್ನು ನೋಡಿ ಹರಸಿ-ಹಾರೈಸುವುದಕ್ಕೆ ಮನವಿ ಮಾಡಿದರು.

TAGGED:Chandan ShettyVidyarthi Vidyarthiniyareಚಂದನ್ ಶೆಟ್ಟಿವಿದ್ಯಾರ್ಥಿ ವಿದ್ಯಾರ್ಥಿನಿಯರೇಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
35 minutes ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
41 minutes ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
52 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
1 hour ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
1 hour ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?