ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಇಂದಿನಿಂದ 5 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿರುವ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಆರೆಂಜ್ ಅಲರ್ಟ್ ಮತ್ತು ಕೊನೆಯ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ ಬಂಪರ್ ಬಹುಮಾನ ಗೆಲ್ಲಿ – ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಆಫರ್
ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್ ನೀಡಿದೆ. ಇದನ್ನೂ ಓದಿ: UPSC ಅಧ್ಯಕ್ಷ ಸ್ಥಾನಕ್ಕೆ ಮನೋಜ್ ಸೋನಿ ರಾಜೀನಾಮೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಭಾನುವಾರ ಸಂಜೆಯೊಳಗೆ KRS ಸಂಪೂರ್ಣ ಭರ್ತಿ ಸಾಧ್ಯತೆ