ತಮಿಳುನಾಡು ಸರ್ಕಾರಿ ಬಸ್‌ಗೆ ಯುವಕನಿಂದ ಕಲ್ಲೇಟು

Public TV
1 Min Read
tamil nadu bus

ಬೆಂಗಳೂರು: ತಮಿಳುನಾಡು (Tamil Nadu) ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲೇಟು ಹೊಡೆದಿದ್ದು, ಬಸ್‌ ಹಿಂಬದಿ ಗಾಜು ಪುಡಿ ಪುಡಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ತಿರುವಣ್ಣಮಲೈಗೆ ಬಸ್‌ ಹೋಗುತ್ತಿತ್ತು. ಟೌನ್‌ಹಾಲ್‌ ಬಳಿ ಚಲಿಸುತ್ತಿದ್ದ ಬಸ್‌ಗೆ ಯುವಕ ಕಲ್ಲೇಟು ಹೊಡೆದಿದ್ದಾನೆ. ಪರಾರಿಯಾಗಲು ಯತ್ನಿಸಿದ ಆತನನ್ನು ಬಸ್‌ ಚಾಲಕ ಮತ್ತು ಕಂಡಕ್ಟರ್‌ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಪತ್ತೆ – 14ರ ಬಾಲಕನಿಗೆ ಸೋಂಕು

ಸೆಟ್‌ಲೈಟ್‌ನಲ್ಲೇ ಬಸ್ ಫುಲ್ ರಶ್ ಅಗಿತ್ತು. ಹಾಗಾಗಿ ನಿಲ್ಲಿಸಿರಲಿಲ್ಲ. ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಯುವಕ ಕಲ್ಲು ಹೊಡೆದಿದ್ದಾನೆ. ತಮಿಳುನಾಡು ಮೂಲದ ಮಹಾರಾಜ ಎಂಬ ಯುವಕನನ್ನು ಎಸ್‌ಜೆ ಪಾರ್ಕ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಯಾಣಿಕರ ಸಮೇತ ಬಸ್ಸನ್ನು ಎಸ್‌ಜೆ ಪಾರ್ಕ್‌ ಠಾಣೆಗೆ ತರಲಾಗಿತ್ತು. ಪರಿಣಾಮವಾಗಿ ಪ್ರಯಾಣಿಕರು ಗಂಟೆಗಟ್ಟಲೆ ಕಾದು ಕುಳಿತುಕೊಳ್ಳುವಂತಾಯಿತು. ಘಟನೆ ಸಂಬಂಧ ಎಸ್‌ಜೆ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಕುವೈತ್‌ನ ಫ್ಲ್ಯಾಟ್‌ನಲ್ಲಿ ಬೆಂಕಿ – ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ

Share This Article