ಅಂದು ರಾಹುಲ್‌ ಗಾಂಧಿ, ಇಂದು ದೀದಿ – ಜೋರು ಮಳೆಯಲ್ಲೂ ಅಬ್ಬರದ ಭಾಷಣ

Public TV
2 Min Read
Mamatha Banerjee

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸದ್ಯ ಸುದ್ದಿಯಲ್ಲಿದ್ದಾರೆ. ಕೋಲ್ಕತ್ತಾದ ಧರ್ಮತಾಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್ (TMC)ನ ಶಹೀದ್ ದಿವಾಸ್ ರ‍್ಯಾಲಿಯಲ್ಲಿ (Dharmatala Rally) ಜೋರು ಮಳೆಯಲ್ಲಿ ಅಬ್ಬರದ ಭಾಷಣ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಜಡಿ ಮಳೆಯಲ್ಲೂ ಭಾಷಣ ಮಾಡುತ್ತಿರುವ ವೀಡಿಯೋ ಸದ್ಯ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸದ್ದು ಮಾಡುತ್ತಿದ್ದು, ಕೆಲವರು ಇದನ್ನು ರಾಹುಲ್‌ ಗಾಂಧಿ (Rahul Gandhi) ಅವರಿಗೆ ಹೋಲಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ

ಹೌದು. ಈ ಹಿಂದೆ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸಮಾರಂಭ ನಡೆಯುತ್ತಿದ್ದ ವೇಳೆ ಭಾರೀ ಮಳೆ ಸುರಿಯುತ್ತಿತ್ತು. ಆದ್ರೆ ಮಳೆಯಲ್ಲೂ ಜಗ್ಗದ ರಾಗಾ ಭಾಷಣ ಮಾಡಿ ಎಲ್ಲರ ಗಮನ ಸೆಳೆದಿದ್ದರು. ಕಾಂಗ್ರೆಸ್​ ನಾಯಕರು ಸಹ ಮಳೆಯಲ್ಲಿ ನೆನೆಯುತ್ತಾ ವೇದಿಕೆ ಮೇಲೆಯೇ ಕುಳಿತುಕೊಂಡಿದ್ದರು. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. ಇದೀಗ ಮಮತಾ ಬ್ಯಾನರ್ಜಿ ಅವರೂ ಸಹ ಮಳೆಯಲ್ಲಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

ಬಾಂಗ್ಲಾದಲ್ಲಿರುವ ಬಂಗಾಳಿಗಳಿಗೆ ಆಶ್ರಯ ಕೊಡ್ತೀವಿ:
ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ವಿರೋಧಿ ನಡೆಯುತ್ತಿರುವ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಸಿಲುಕಿರುವ ಎಲ್ಲಾ ಬಂಗಾಳ ನಿವಾಸಿಗಳಿಗೆ ನಮ್ಮ ಸರ್ಕಾರ ಸಹಕಾರ ನೀಡಲು ಬದ್ಧವಾಗಿದೆ. ತಮ್ಮ ಬಳಿಗೆ ಬರುವವರಿಗೆ ಸರ್ಕಾರ ಆಶ್ರಯ ನೀಡಲಿದೆ ಎಂದೂ ಭರವಸೆ ನೀಡಿದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಕಂಡಲ್ಲಿ ಗುಂಡು ಹಾರಿಸಲು ಸೂಚನೆ

Share This Article