ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

Public TV
2 Min Read
Rohit Sharma

ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಶೀಘ್ರದಲ್ಲೇ ನಡೆಯಲಿರುವ ಬಿಸಿಸಿಐ (BCCI) ಮಹತ್ವದ ಸಭೆಯಲ್ಲಿ ಮೆಗಾ ಹರಾಜಿನ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

suryakumar yadav 1 1

ಹೌದು. 3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡ ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

ಮಹತ್ವದ 5 ಬೆಳವಣಿಗೆ ಏನು?
ಸದ್ಯದ ಮಾಹಿತಿ ಪ್ರಕಾರ, ಮೆಗಾ ಹರಾಜು ವೇಳೆ ಫ್ರಾಂಚೈಸಿಗಳು ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಆಟಗಾರರನ್ನು ಬಿಡುಗಡೆಗೊಳಿಸಬೇಕಾಗುತ್ತದೆ. ಹೀಗಾಗಿ ಐದು ಬಾರಿ ಮುಂಬೈ ಇಂಡಿಯನ್ಸ್‌ಗೆ ಟ್ರೋಫಿ ತಂದುಕೊಟ್ಟ ನಾಯಕ ರೋಹಿತ್‌ ಶರ್ಮಾ (Rohit Sharma) ಈ ಬಾರಿ ಫ್ರಾಂಚೈಸಿಗೆ ಗುಡ್‌ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. 2025ರ ಐಪಿಎಲ್‌ನಲ್ಲಿ ಹಿಟ್‌ಮ್ಯಾನ್‌ ಮುಂಬೈ ಇಂಡಿಯನ್ಸ್‌ ಬಿಟ್ಟು ಗುಜರಾತ್‌ ಟೈಟಾನ್ಸ್‌ ಅಥವಾ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಲಿದ್ದಾರೆ ಎಂದು ವರದಿಯಾಗಿದೆ.

MUMBAI INDIANS

ಇದರೊಂದಿಗೆ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah), ಸ್ಫೋಟಕ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಹ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗುಡ್‌ಬೈ ಹೇಳಲಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ಗುಜರಾತ್‌ ಟೈಟಾನ್ಸ್‌ ಫ್ರಾಂಚೈಸಿಯನ್ನು ಖರೀದಿಸಲಿದ್ದಾರೆ. 4 ಫ್ರಾಂಚೈಸಿಗಳು ತಮ್ಮ ತಂಡದ ನಾಯಕರನ್ನು ಬದಲಾವಣೆ ಮಾಡಲಿವೆ. ಇನ್ನೂ 2024ರ ಐಪಿಎಲ್‌ನಲ್ಲಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ನಾಯಕ ರಿಷಭ್‌ ಪಂತ್‌ ಸಿಎಸ್‌ಕೆ ಸೇರಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

Rishabh Pant

ಮರಳಿ ತವರಿಗೆ ಕನ್ನಡಿಗ ಕೆ.ಎಲ್‌ ರಾಹುಲ್‌?:
2022ರಲ್ಲಿ ಆರಂಭವಾದಾಗಿನಿಂದಲೂ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಆಕ್ಷೇಪಕ್ಕೆ ಕಾರಣವಾಗಿತ್ತು. ಈ ಘಟನೆಯ ನಂತರ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

KL Rahul

ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವನ್ನ ಪ್ರತಿನಿಧಿಸಿದ್ದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

Share This Article