ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ಮಾತನಾಡಲು ಇದೀಗ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದಾರೆ.
ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ. ಇದನ್ನೂ ಓದಿ:ನಟನೆ ಚೆನ್ನಾಗಿದೆ ಅಂತಾರೆ ಆದರೆ ಸಿನಿಮಾ ಆಫರ್ ಕೊಡಲ್ಲ: ನೇಹಾ ಧೂಪಿಯಾ ಬೇಸರ
ಅಂದಹಾಗೆ, ನಿನ್ನೆ (ಜು.23) ರಾಮನಗರದ ಕಾರ್ಯಕ್ರಮವೊಂದರಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾದ್ದರು. ಅದರ ಬಗ್ಗೆ ನಾಳೆ ಮಾತನಾಡ್ತೀನಿ. ದರ್ಶನ್ ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ ಬೆಳಗ್ಗೆ ಅವರನ್ನ ಭೇಟಿ ಮಾಡ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು.
ಏನಾದರೂ ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಯಾರಿಗೇ ಆಗಿದ್ದರೂ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದವರೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಡಿಕೆಶಿ ಮಾತನಾಡಿದ್ದರು.