ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ಯಾಕೆ? – ಕಾರಣ ಬಿಚ್ಚಿಟ್ಟ ಜೋ ಬೈಡೆನ್‌

Public TV
1 Min Read
Joe Biden

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ (US President Election) ಹಿಂದೆ ಸರಿದ ಬಗ್ಗೆ ಅಧ್ಯಕ್ಷ ಜೋ ಬೈಡೆನ್‌ (Joe Biden) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಪೀಳಿಗೆಯನ್ನು ಬೆಳಕಿಗೆ ತರುವುದು ಮುಖ್ಯ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಪಕ್ಷ ಮತ್ತು ದೇಶವನ್ನು ಒಗ್ಗೂಡಿಸಲು 2024ರ ಚುನಾವಣೆಯಿಂದ ಹೊರಗುಳಿದಿರುವುದಾಗಿ ಬೈಡೆನ್‌ ಹೇಳಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದರ ರಕ್ಷಣೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರವು ಮುಖ್ಯವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌!

joe biden and kamala harris

ಹೊಸ ಪೀಳಿಗೆಯನ್ನು ಬೆಳಕಿಗೆ ತರಬೇಕಿದೆ ಎಂದು ನಾನು ನಿರ್ಧರಿಸಿದ್ದೇನೆ. ಅದು ನಮ್ಮ ರಾಷ್ಟ್ರವನ್ನು ಒಂದುಗೂಡಿಸಲು ಉತ್ತಮ ಮಾರ್ಗ ಎಂದು ಬೈಡೆನ್‌ ತಿಳಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆ ಸಮೀಪಿಸುತ್ತಿದ್ದಂತೆ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಹೆಚ್ಚು ಸಕ್ರಿಯರಾಗಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಯಸ್ಸು ಮತ್ತು ಮಾನಸಿಕ ಸಾಮರ್ಥ್ಯದ ಬಗ್ಗೆ ಪಕ್ಷದೊಳಗಡೆಯೇ ಅಸಮಾಧಾನ ಎದ್ದಿತ್ತು. ಈ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷೀಯ ಚುನಾವಣಾ ರೇಸ್‌ನಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: Nepal Plane Crash; ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಭಾರತ ಸಂಜಾತೆ ಕಮಲಾ ಹ್ಯಾರೀಸ್‌ ಅವರ ಹೆಸರನ್ನು ಘೋಷಿಸಲಾಗಿದೆ. ಬೈಡೆನ್‌ ನಿರ್ಧಾರಕ್ಕೆ ಪಕ್ಷದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article