Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

Public TV
2 Min Read
Chinese shooters

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ.

ಶನಿವಾರ (ಜು.27) ನಡೆದ 10 ಮೀಟರ್‌ ಏರ್‌ ರೈಫಲ್‌ ಮಿಶ್ರ ತಂಡಗಳ ಸ್ಪರ್ಧೆಯಲ್ಲಿ ಚೀನಾದ ಶೂಟರ್‌ಗಳಾದ (Chinese Shooters) ಹುವಾಂಗ್‌ ಯುಟಿಂಗ್‌ ಮತ್ತು ಶೆಂಗ್‌ ಲಿಹಾವೊ ಜೋಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚೀನಾಗೆ ಮೊದಲ ಚಿನ್ನದ ಪದಕ ತಂದುಕೊಟ್ಟರು. ಇದು ಪ್ರಸಕ್ತ ಕ್ರೀಡಾಕೂಟದಲ್ಲಿ ಗೆದ್ದ ಮೊದಲ ಚಿನ್ನದ ಪದಕವೂ ಆಗಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ

Chinese shooters 2

ಏರ್‌ ರೈಫಲ್‌ ಸ್ಪರ್ಧೆಯ ಫೈನಲ್‌ ರೌಂಡ್‌ನಲ್ಲಿ ದಕ್ಷಿಣ ಕೊರಿಯಾದ ಲಿಹಾವೊ ಶೆಂಗ್‌ನ ಜಿಹ್ಯೆನ್ ಕೆಯುಮ್ – ಹಜುನ್ ಪಾರ್ಕ್ ಜೋಡಿಯನ್ನು 16-12 ಅಂತರದಲ್ಲಿ ಸೋಲಿಸುವ ಮೂಲಕ ಹುವಾಂಗ್‌ ಮತ್ತು ಶೆಂಗ್‌ ಜೋಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

ಇದಕ್ಕೂ ಮುನ್ನ 10 ಮೀಟರ್‌ ಮಿಶ್ರ ತಂಡಗಳ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಕಝಕಿಸ್ತಾನದ ಅಲೆಕ್ಸಾಂಡ್ರಾಲೆ ಮತ್ತು ಇಸ್ಲಾಂ ಸತ್ಪಯೇವ್‌ ಜೋಡಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಇದು ಈ ಟೂರ್ನಿಯ ಮೊದಲ ಪದಕವಾಗಿದೆ.

Chinese shooters 3

ಪ್ಯಾರಿಸ್‌ನ ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ 2024ರ ಒಲಿಂಪಿಕ್ಸ್‌ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು. ಕೆಲ ತಂಡಗಳಿಗೆ ಪ್ರತ್ಯೇಕ ಬೋಟ್ ಸಿಕ್ಕರೆ, 3-4 ತಂಡಗಳನ್ನು ಒಟ್ಟಿಗೆ ಸೇರಿಸಿ ಬೋಟ್‌ನಲ್ಲಿ ಪಥ ಸಂಚಲನ ನಡೆಸಿದರು. ಪಥ ಸಂಚಲನದ ವೇಳೆ ತುಂತುರು ಮಳೆ ಬಂದರೂ ಸ್ಪರ್ಧಿಗಳು ಉತ್ಸಾಹದಿಂದ ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು. ಸೀನ್‌ ನದಿಯ ಆಸ್ಟರ್‌ಲಿಟ್ಜ್‌ ಬ್ರಿಡ್ಜ್‌ನ ಬಳಿ ಆರಂಭಗೊಂಡ ಪಥ ಸಂಚಲನ 6 ಕಿ.ಮೀ ದೂರದಲ್ಲಿರುವ ಐಫಲ್‌ ಟವರ್‌ ಬಳಿ ಮುಕ್ತಾಯಗೊಂಡಿತು. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?

Share This Article