ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

Public TV
2 Min Read
G PARAMESHWAR

– ಅನಾವಶ್ಯಕ ದುರುದ್ದೇಶದಿಂದ ದೂರು: ಗೃಹಸಚಿವ

ದಾವಣಗೆರೆ: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ (G Parmeshwar) ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್‌ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಮೇಕೆ ಮಾಂಸ?

Dog Meat

ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ

ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಸಂಪತ್ತು ಲೂಟಿ ಆಗುತ್ತಿದೆ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆ ಮಾಡಿದ್ರೆ ಬಿಎಸ್‌ವೈ ಇದ್ದಾನೋ, ಬಿವೈವಿ ಇದ್ದಾನೋ ಎಂದು ಗೊತ್ತಾಗುತ್ತೆ: ಯತ್ನಾಳ್

ನಾವು ರಾಜ್ಯದ ಜನತೆಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿಗಳು ಒಂದು ಆಯೋಗ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸ ಆಗಿಲ್ಲ. ವಾಲ್ಮೀಕಿ ಹಗರಣವನ್ನು ನಾವು ಜಸ್ಟಿಫೈ ಮಾಡುತ್ತಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ. ಅದರ ವರದಿ ಬರಲಿ. ಒಂದು ವೇಳೆ ವಾಲ್ಮೀಕಿ ಹಗರಣದಲ್ಲಿ ಮಂತ್ರಿಗಳ ಅಕೌಂಟ್ ಹಣ ಹೋಗಿದೆ ಎಂದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: 2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್‌ ಶಂಕರ್‌

Share This Article