‘ಶಿವಾಜಿ ಸುರತ್ಕಲ್ 2′ (Shivaji Surathkal -2) ಸಿನಿಮಾ ಸಕ್ಸಸ್ ಬಳಿಕ ‘ದೈಜಿ’ ಚಿತ್ರವನ್ನು ನಿರ್ದೇಶಕ ಆಕಾಶ್ ಶ್ರೀವತ್ಸ (Akash Srivasta) ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಚಿತ್ರೀಕರಣಕ್ಕೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ನಿರ್ದೇಶಕ ಆಕಾಶ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಮೇಶ್ ಅರವಿಂದ್ ನಟನೆಯ ‘ದೈಜಿ’ ಸಿನಿಮಾ ಸ್ಕ್ರಿಪ್ಟ್ ಪೂಜೆ ಇದೀಗ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜರುಗಿದೆ. ಸಿನಿಮಾ ಶೂಟಿಂಗ್‌ಗೂ ಮುನ್ನ ಚಾಮುಂಡೇಶ್ವರಿ ದೇವಿಗೆ ನಿರ್ದೇಶಕ ಆಕಾಶ್ ಶ್ರೀವತ್ಸ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್
View this post on Instagram
ಇತ್ತೀಚೆಗೆ ರಮೇಶ್ ಅರವಿಂದ್ (Ramesh Aravind) ಅವರ ‘ದೈಜಿ’ (Daiji Film) ಸಿನಿಮಾದ ಕಲರ್‌ಫುಲ್ ಪೋಸ್ಟರ್ ಅನ್ನು ರಿಲೀಸ್ ಮಾಡಿತ್ತು ಚಿತ್ರತಂಡ. ಡಿಫರೆಂಟ್ ಲುಕ್‌ನಲ್ಲಿ ನಟ ಕಾಣಿಸಿಕೊಂಡಿದ್ದರು. ಇದೀಗ ಸಿನಿಮಾ ಶೂಟಿಂಗ್ ಶುರು ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.
ಅಂದಹಾಗೆ, ಶಿವಾಜಿ ಸುರತ್ಕಲ್, ಶಿವಾಜಿ ಸುರತ್ಕಲ್-2 ಸಿನಿಮಾ ನಂತರ ಮತ್ತೆ ‘ದೈಜಿ’ ಸಿನಿಮಾಗಾಗಿ ರಮೇಶ್ ಅರವಿಂದ್ ಜೊತೆ ಆಕಾಶ್ ಶ್ರೀವತ್ಸ ಕೈಜೋಡಿಸಿದ್ದಾರೆ. 3ನೇ ಬಾರಿ ಈ ಕಾಂಬಿನೇಷನ್ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಸಖತ್ ಥ್ರಿಲ್ ಆಗಿದ್ದಾರೆ.