Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

Public TV
Last updated: July 30, 2024 5:01 pm
Public TV
Share
3 Min Read
Hassan Rain effect 2
SHARE

ಹಾಸನ/ಮಂಗಳೂರು: ರಾಜ್ಯಾದ್ಯಂತ ಮಳೆಯ (Heavy Rain) ಆರ್ಭಟ ಮುಂದುವರಿದ ಕಾರಣ ವಿವಿಧ ಜಿಲ್ಲೆಗಳಲ್ಲಿ ಅವಾಂತರಗಳು ಮುಂದುವರಿದಿವೆ. ಹಾಸನ-ಚಿಕ್ಕಮಗಳೂರಿನ ಘಾಟ್ ಪ್ರದೇಶದಲ್ಲಿ ಭಾರೀ ಭೂಕುಸಿತಗಳು (Landslide) ಸಂಭವಿಸಿವೆ.

ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ (Shiradi Ghat Landslide) ಉಂಟಾಗಿದೆ. ಈ ಸಂದರ್ಭದಲ್ಲಿ ಹಾದುಹೋಗ್ತಿದ್ದ ಎರಡು ಕಾರು, ಗ್ಯಾಸ್ ಟ್ಯಾಂಕರ್ (Gas Tanker), ಲಾರಿ ಸೇರಿ ಆರು ವಾಹನಗಳ ಮೇಲೆ ಗುಡ್ಡ ಕುಸಿದು ಅನಾಹುತ ಸಂಭವಿಸಿದೆ. ಮಣ್ಣು ಬಿದ್ದಿರುವ ಧಾಟಿಗೆ ಗ್ಯಾಸ್ ಟ್ಯಾಂಕರ್ ಮತ್ತು ಲಾರಿ ಪಲ್ಟಿ ಹೊಡೆದಿವೆ. ಅದೃಷ್ಟವಶಾತ್ ವಾಹನಗಳಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Hassan Rain effect

ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಗ್ಯಾಸ್ ಸೋರಿಕೆ ಭೀತಿ ಎದುರಾಗಿದೆ. ಭಾರೀ ಮಳೆ ನಡುವೆಯೇ ಮಣ್ಣು ತೆರವು ಕಾರ್ಯ ನಡೆದಿದೆ. ಇದೇ ವೇಳೆ, ಎತ್ತಿನಹೊಳೆ ಯೋಜನೆ ಕಾಮಗಾರಿಯ ಪರಿಣಾಮ ಸಕಲೇಶಪುರದ ಕುಂಬರಡಿ-ಹಾರ್ಲೆ ಎಸ್ಟೇಟ್ ನಡುವೆ ಗುಡ್ಡ ಕುಸಿದು ಸುಮಾರು 200 ಅಡಿಯಷ್ಟು ದೂರದವರೆಗೂ ರಸ್ತೆಯೇ ಕತ್ತರಿಸಿಹೋಗಿದೆ. ಇಲ್ಲಿ ರಸ್ತೆಯೇ ಕಾಣುತ್ತಿಲ್ಲ. ಇದರಿಂದ ಬಾರ್ಲಿ-ಮಲ್ಲಗದ್ದೆ-ಕಾಡುಮನೆ ಸೇರಿ ಸುಮಾರು 10 ಗ್ರಾಮಗಳಿಗೆ ಸಂಪರ್ಕವೇ ಇಲ್ಲವಾಗಿದೆ.

Hassan Rain effect 3

ಈ ರಸ್ತೆ ಸಮೀಪವೇ ಎತ್ತಿನಹೊಳೆ ಯೋಜನೆ ಹಾದುಹೋಗಿದೆ. ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎಂಬ ಆರೋಪ ಕೇಳಿಬಂದಿದೆ. ಇವೆಲ್ಲವುಗಳ ಪರಿಣಾಮ ಶಿರಾಡಿಘಾಟ್‌ನಲ್ಲಿ ಎರಡು ಬದಿಯ ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ನಡುರಸ್ತೆಯಲ್ಲಿ ಸಿಲುಕಿ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

ಮಂಗಳೂರು ಉಪ್ಪಿನಂಗಡಿ ಮಾರ್ಗ ಸಂಪೂರ್ಣ ಬಂದ್:
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡ ಕುಸಿದು ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಘಟನೆ ನಡೆದಿದೆ. ಸದ್ಯ ಬಸ್‌ಗೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಗಾಗಿ ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಾಣಿಕರು ಬದಲಿ ರಸ್ತೆ ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಸಚಿವ ಸಂಪುಟ ಪುನರ್ ರಚನೆ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಲೀಂ ಅಹಮದ್

ಕರಾವಳಿಯಲ್ಲೂ ಅವಾಂತರ:
ಕರಾವಳಿ-ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದೆ. ಚಿಕ್ಕಮಗಳೂರಿನ ಮಹಲ್ಗೋಡು ಸೇತುವೆಗೆ ಜಲಬೇಲಿ ಹಾಕಿದೆ. ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಬಾಳೆಹೊನ್ನೂರಲ್ಲಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದ ಜನರನ್ನು ಬೋಟ್ ಮೂಲಕ ರಕ್ಷಿಸಲಾಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆಯೇ ಅಪಾರ ನೀರು ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

ಶೃಂಗೇರಿ ಪಟ್ಟಣ ಮತ್ತೆ ಜಲಾವೃತವಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾವೇರಿ ಅಬ್ಬರಕ್ಕೆ ಭಾಗಮಂಡಲ ರಸ್ತೆಗಳು, ಹೆಮ್ಮಾಡು ಗ್ರಾಮ ಜಲಾವೃತವಾಗಿದೆ. ತ್ರಿವೇಣಿ ಸಂಗಮ ತುಂಬಿ ಭಗಂಡೇಶ್ವರ ಸನ್ನಿಧಿಯ ಮೆಟ್ಟಿಲುವರೆಗೆ ನೀರು ಆವರಿಸಿದೆ. ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ವಿರಾಜಪೇಟೆಯ ಕಾಕೋಟು-ಪರಂಬಿಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಲಾಗಿದೆ. ಗಡಿಭಾಗದ ಪೆರಾಜೆಯಲ್ಲಿ ಅಡಿಕೆತೋಟದ ಮೇಲೆ ಗುಡ್ಡ ಕುಸಿದಿದೆ.

ದಕ್ಷಿಣ ಕನ್ನಡದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿದೆ. ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣದ ಬಳಿಯೇ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಡುಪಿಯ ಮಣಿಪುರ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ದೋಣಿ ಸಿಲುಕಿದೆ. ಬೇಲೂರಿನ ಬಿರಡಳ್ಳಿ ಬಳಿ ಸೇತುವೆ ಮುಳುಗಡೆಯಾಗಿದೆ. ಸುಳ್ಳಕ್ಕಿಯಲ್ಲಿ ರಸ್ತೆಯೇ ಕೊಚ್ಚಿ ಹೋಗಿದೆ. ಆಲೂರಿನ ಮುತ್ತಿಗೆ ಬಳಿ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರೀತಿದೆ. ನೂರಾರು ಎಕರೆ ಜಮೀನು ಜಲಾವೃತವಾಗಿದೆ. ಇದನ್ನೂ ಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ

TAGGED:karnatakaKarnataka RainsRain EffectShiradi Ghat Landslideಕರ್ನಾಟಕ ಭೂಕುಸಿತಮಳೆಶಿರಾಡಿ ಘಾಟ್ಹಾಸನ
Share This Article
Facebook Whatsapp Whatsapp Telegram

Cinema Updates

shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories

You Might Also Like

Jyoti Sharma
Crime

ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Public TV
By Public TV
1 minute ago
PM Modi
Latest

ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

Public TV
By Public TV
8 minutes ago
POCSO Special Court
Crime

ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್‌

Public TV
By Public TV
48 minutes ago
gujarat cops son
Crime

150 ಕಿಮೀ ಸ್ಪೀಡಲ್ಲಿ ಕಾರು ಚಾಲನೆ – ASI ಪುತ್ರನ ರೇಸ್‌ ಚಟಕ್ಕೆ ಇಬ್ಬರು ಪಾದಚಾರಿಗಳು ಬಲಿ

Public TV
By Public TV
1 hour ago
basava jaya mruthyunjaya swamiji
Bagalkot

ಪಂಚಮಸಾಲಿ ಪೀಠಕ್ಕೆ ಹೊಸ ಶ್ರೀ? ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆಗೆ ನಿರ್ಧಾರ?

Public TV
By Public TV
1 hour ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?