ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ

Public TV
1 Min Read
Vidhana Soudha

ಬೆಂಗಳೂರು: ಮುಡಾ ಹಗರಣ (MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರವಾಗಿ ಸಂಪುಟ (Cabinet) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್ ನೀಡಿದ್ದರು. ಆದರೆ ರಾಜ್ಯಪಾಲರ ನೋಟಿಸ್ ವಿರುದ್ಧ ಸುದೀರ್ಘ ನಿರ್ಣಯ ಮಾಡಿ ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ. ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ರೆ ಮುಂದೇನು?

Siddaramaiah MUDA SCAM

ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಯಿತು. ಮೂಡ ದಾಖಲೆಗಳನ್ನು ಸಚಿವ ಸಂಪುಟ ಸಭೆಗೆ ತರಿಸಿಕೊಳ್ಳಲಾಗಿತ್ತು. ಯಾರಿಗೆ ಸೈಟುಗಳ ಹಂಚಿಕೆಯಾಗಿದೆ ಎಂಬ ಸಂಪೂರ್ಣ ವಿವರ ತರಿಸಿಕೊಂಡು ಚರ್ಚಿಸಲಾಯಿತು.

ಕ್ಯಾಬಿನೆಟ್‌ನಲ್ಲಿ, ರಾಜ್ಯಪಾಲರು ನೋಟಿಸ್‌ನಲ್ಲಿ ಎತ್ತಿರುವ ಪ್ರಶ್ನೆಗಳನ್ನು ವಿರೋಧಿಸಿ ಸುದೀರ್ಘ ನಿರ್ಣಯ ತೆಗೆದುಕೊಳ್ಳಲಾಯಿತು. ಸಾಮಾಜಿಕ ಕಾರ್ಯಕರ್ತರ ಟಿ.ಜೆ.ಅಬ್ರಹಾಂ ಎತ್ತಿರುವ ಆರೋಪಗಳಿಗೂ ದಾಖಲೆ ಸಮೇತ ಉತ್ತರ ಕೊಟ್ಟು ನಿರ್ಣಯಿಸಲಾಯಿತು. ಇದನ್ನೂ ಓದಿ: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ನಿರ್ಣಯ ಪಾಸ್ ಮಾಡಲಾಯಿತು. ರಾಜ್ಯಪಾಲರು ನೀಡಿರುವ ನೋಟಿಸ್ ಸರಿಯಿಲ್ಲ. ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯಬೇಕು. ಟಿ.ಜೆ.ಅಬ್ರಹಾಂ ಮಾಡಿರುವ ಎಲ್ಲ ದೂರುಗಳಿಗೂ ದಾಖಲೆಗಳ ಸಮೇತ ಉತ್ತರ ಕೊಡಲು ಸಂಪುಟ ತೀರ್ಮಾನಿಸಿದೆ.

ರಾಜ್ಯಪಾಲರ ನೋಟಿಸ್‌ಗೆ ಸಂಪುಟ ಸಭೆ ತೀವ್ರ ಅಸಮಾಧಾನ ಹೊರಹಾಕಿದೆ. ನೋಟಿಸ್‌ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಸ್ಥಾನ ರಾಜಕೀಯ ದುರುಪಯೋಗದ ಹಾದಿಯಲ್ಲಿರುವ ಬಗ್ಗೆ ಅನುಮಾನ ಮೂಡಿದೆ. ಪದ ಮತ್ತು ಒಕ್ಕಣಿಕೆ ಸಹಿತ ನೋಟಿಸ್ ವಾಪಸ್ ಪಡೆಯಬೇಕು. ಇಲ್ಲವೇ ಕಾನೂನು ಹೋರಾಟ ನಡೆಸಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

Share This Article