ಬೆಂಗಳೂರು: ಬಿಜೆಪಿ (BJP) ಹಾಗೂ ಜೆಡಿಎಸ್‍ನಿಂದ (BJP) ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ (Mysuru Chalo padayatra) ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಬಸವನಗುಡಿಯ ಗೌರಮ್ಮ ಎಂದು ಗುರುತಿಸಲಾಗಿದೆ. ಬಹಿರಂಗ ಸಭೆಗೂ ಮುನ್ನ ನಡೆದು ಬರುತ್ತಿರುವಾಗ ಅವರಿಗೆ ಹೃದಯಾಘಾತವಾಗಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.
ಭಾಷಣ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ತೆರಳಿ ಅಂತಿಮ ದರ್ಶನ ಪಡೆದಿದ್ದಾರೆ.
ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದು, ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.