ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಯೂನಸ್‌ ಇಂದು ಪ್ರಮಾಣ ವಚನ

Public TV
1 Min Read
mohammad younus

ಢಾಕಾ: ಬಾಂಗ್ಲಾದೇಶದಲ್ಲಿನ (Bangladesh) ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ (Muhammad Yunus) ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ ಜಾರಿಗೆ ಬರಲಿದೆ.

ಮುಹಮ್ಮದ್ ಯೂನಸ್ ಅವರು ಗುರುವಾರ ರಾತ್ರಿ 8:00 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಹೇಳಿದ್ದಾರೆ. ಮಧ್ಯಂತರ ಸರ್ಕಾರದ ಸಲಹಾ ಮಂಡಳಿಯು 15 ಸದಸ್ಯರನ್ನು ಒಳಗೊಂಡಿರಬಹುದು ಎಂದು ಸೇನಾ ಮುಖ್ಯಸ್ಥರು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಚುಕ್ಕಾಣಿ ಹಿಡಿಯಲಿದ್ದಾರೆ ಹಸೀನಾ ಕಟು ಟೀಕಾಕಾರ ಮೊಹಮ್ಮದ್‌ ಯೂನುಸ್‌

Bangladesh Protests Updates Hindu temples damaged amid Bangladesh unrest Indian cultural centre vandalised 1

ದೇಶಾದ್ಯಂತ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತಿದೆ. ಇದು ರಾಷ್ಟ್ರದ ಸ್ಥಿರತೆಗೆ ಧನಾತ್ಮಕ ಸಂಕೇತವಾಗಿದೆ ಇದೇ ಸಮಯದಲ್ಲಿ ತಿಳಿಸಿದ್ದಾರೆ. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ್ದರು. ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದರು.

ಅರ್ಥಶಾಸ್ತ್ರಜ್ಞ ಯೂನಸ್ ಅವರಿಗೆ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಡವರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ನೊಬೆಲ್​ ಶಾಂತಿ ಪ್ರಶಸ್ತಿ ಸಿಕ್ಕಿದೆ. ಇವರು ಸ್ಥಾಪಿಸಿದ ಗ್ರಾಮೀಣ ಬ್ಯಾಂಕ್ ಸಹ ಇದೇ ಸಂದರ್ಭದಲ್ಲಿ ಬಹುಮಾನವನ್ನು ಪಡೆದುಕೊಂಡಿತು. ಯೂನಸ್ ವಿರುದ್ಧ ಭ್ರಷ್ಟಾಚಾರ ಸೇರಿ 150 ಕ್ಕೂ ಹೆಚ್ಚು ಪ್ರಕರಣಗಳಿದೆ. ಆರೋಪ ಸಾಬೀತಾದರೆ ಅವರನ್ನು ವರ್ಷಗಳವರೆಗೆ ಜೈಲಿನಲ್ಲಿಡಬಹುದು. ಆದರೆ ಯೂನಸ್ ಅವರು ಎಲ್ಲಾ ಆರೋಪಗಳನ್ನು ನಿರಾಕರಿಸುತ್ತಾ ಬಂದಿದ್ದಾರೆ. ಇದನ್ನೂ ಓದಿ: ವಿಶ್ವದ ಅತಿದೊಡ್ಡ ಯುರೇನಿಯಂ ಗಣಿಗಾರಿಕೆಯನ್ನು ಆಸ್ಟ್ರೇಲಿಯಾ ನಿಷೇಧಿಸಿದ್ದೇಕೆ? 

Share This Article