ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಆಹಾರ ಸೇವನೆ (Food Poison) ಬಳಿಕ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಈಗ ಐದಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ:ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ – ಎಫ್‌ಎಸ್‌ಎಲ್ ವರದಿಯಲ್ಲಿ ಸ್ಫೋಟಕ ಸತ್ಯ
ಕಳೆದ ಒಂದು ವಾರದಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 23 ವರ್ಷದ ಮಲ್ಲಮ್ಮ (Mallamma) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆಗಸ್ಟ್ 1ರಂದು ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಐದು ಜನರಲ್ಲಿ ಮೂವರು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದರು. 60 ವರ್ಷದ ಭೀಮಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬಳಿಕ 57 ವರ್ಷದ ಈರಮ್ಮ, 21 ವರ್ಷದ ಮಲ್ಲೇಶ, 19 ವರ್ಷದ ಪಾರ್ವತಿ ಮನೆಯಲ್ಲಿ ಸೇವಿಸಿದ್ದ ಮಾಂಸಾಹಾರದಿಂದ ಅನಾರೋಗ್ಯ ಉಂಟಾಗಿ ಒಂದೇ ದಿನ ಸಾವನ್ನಪ್ಪಿದ್ದರು.
ಮರಣೋತ್ತರ ಪರೀಕ್ಷಾ ವರದಿ ಮತ್ತು ಎಫ್‌ಎಸ್‌ಎಲ್ ವರದಿ ಬರುವುದು ಇನ್ನೂ ಬಾಕಿಯಿದೆ. ಒಂದೇ ಕುಟುಂಬದ ಎಲ್ಲಾ ಸದಸ್ಯರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆಹಾರದಲ್ಲಿ ಕೀಟನಾಶಕ ಬೆರೆತಿರುವ ಶಂಕೆಯಿದೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ಮುಂದುವರೆದಿದೆ.