ರಾಜಧಾನಿ ಬೆಂಗಳೂರಿಗೆ ನಾಳೆ ಯೆಲ್ಲೋ ಅಲರ್ಟ್

Public TV
1 Min Read
bengaluru rain

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ನಾಳೆ ಬೆಂಗಳೂರಲ್ಲಿ (Bengaluru Rains) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆ.ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ. ಈ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

bengaluru rain 1

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್‌ ರಚನೆ – ಸಿದ್ದರಾಮಯ್ಯ

ಬೆಂಗಳೂರಲ್ಲಿ ಇಂದು ಮುಂಜಾನೆ ಬೆಂಗಳೂರು ನಗರದಾದ್ಯಂತ ಎಡೆಬಿಡದೆ ಭಾರೀ ಮಳೆ ಸುರಿಯಿತು. ಪರಿಣಾಮವಾಗಿ ರಸ್ತೆಗಳಲ್ಲೆಲ್ಲ ನೀರು ನಿಂತು ಚರಂಡಿಯಂತಾಯಿತು. ಇದರಿಂದ ವಾಹನ ಸಂಚಾರ ದಟ್ಟಣೆ ಉಂಟಾಯಿತು.

ಬನ್ನೇರುಘಟ್ಟ ರಸ್ತೆ, ಮಡಿವಾಳ, ಹೊಸೂರು ರಸ್ತೆ, ಜಯದೇವ ಅಂಡರ್‌ಪಾಸ್‌ನಲ್ಲಿ ಬೆಳಗ್ಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರದ ರಸ್ತೆಯಲ್ಲೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ನಗರದ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ಎದುರಾಯಿತು.

Share This Article