Bengaluru | ಆಗಸ್ಟ್‌ 15ರ ವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Public TV
3 Min Read
namma metro green line

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line Metro Route) ಮೂರು ದಿನ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್‌ ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೀಣ್ಯ ಕೈಗಾರಿಕಾ ಪ್ರದೇಶದಿಂದ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು (Metro Train) ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

NAMMA METRO 1

ಆಗಸ್ಟ್‌ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆ ಬದಲಿಗೆ 10 ಗಂಟೆಗೆ ಕೊನೆಯಾಗಲಿದೆ. ಆ. 14 ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6 ಗಂಟೆಗೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆಗೆ ಬದಲಾಗಿ 10 ಗಂಟೆ ವರೆಗೆ ಮಾತ್ರ ಇರಲಿದೆ. ಆ.15ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6ಕ್ಕೆ ಸೇವೆ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದೆ.

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14ರಂದು ಕೊನೆಯ ರೈಲು ಸೇವೆ ರಾತ್ರಿ 11.05 ಗಂಟೆ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆ ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಇದನ್ನೂ ಓದಿ: ಟಿಬಿ ಡ್ಯಾಂನ 19ನೇ ಗೇಟ್ ಕೊಚ್ಚಿ ಹೋಗಿ 46 ಗಂಟೆ; ಶರವೇಗದಲ್ಲಿ ಹೊಸ ಗೇಟ್‌ಗಳ ನಿರ್ಮಾಣ ಕಾರ್ಯ

ಆದಾಗ್ಯೂ, ಪೀಣ್ಯ ಕೈಗಾರಿಕಾ ಪ್ರದೇಶದಿಂದ – ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11, 12 ಗಂಟೆವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆ ಆ.14 ಮತ್ತು 15 ರಂದು ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗುತ್ತದೆ. ಆಧಿದರೆ, ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿಗಮ ತಿಳಿಸಿದೆ.

ಲಾಲ್‌ಬಾಗ್‌ಗೆ ಪೇಪರ್‌ ಟಿಕೆಟ್‌ ವ್ಯವಸ್ಥೆ:
ಆಗಸ್ಟ್‌ 19ರ ವರೆಗೆ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ವೀಕ್ಷಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ತ್ವರಿತ ಪ್ರಯಾಣಕ್ಕಾಗಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ವಿತರಿಸುತ್ತಿರುವುದಾಗಿ ಬಿಎಂಆರ್‌ಸಿಎಲ್‌ ಹೇಳಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಆ. 15, 17 ಮತ್ತು 18ರಂದು ಮೆಟ್ರೋದಲ್ಲಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಪೇಪರ್‌ ಟಿಕೆಟ್‌ ಲಭ್ಯವಿರಲಿದೆ. ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್‌ ಟಿಕೆಟ್‌ ಪಡೆದು ಪ್ರಯಾಣಿಸಬಹುದು.

NAMMA METRO 4

ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ಗಳನ್ನು ಖರೀದಿಸಿದ ದಿನದಂದು ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಟೋಕನ್‌, ಕಾರ್ಡ್‌, ಕ್ಯೂ ಆರ್‌ ಕೋಡ್‌ ಬಳಸಿ ಟಿಕೆಟ್‌ ಪಡೆಯುವ ಮೂಲಕ ಲಾಲ್‌ಬಾಗ್‌ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್‌ ಟಿಕೆಟ್‌, ಕಾರ್ಡ್‌ ಮತ್ತು ಕ್ಯೂ ಆರ್‌ ಕೋಡ್‌ ಟಿಕೆಟ್‌ ಮೂಲಕ ಮಾತ್ರ ಪ್ರಯಾಣಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ 

Share This Article