ನವದೆಹಲಿ: ರಾಜ್ಯಗಳಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಜೊತೆಗೆ ಚರ್ಚಿಸಿ ಅವರು ಕರ್ನಾಟಕಕ್ಕೂ ಅಕ್ಕಿ ನೀಡಲು ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲಿ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.
ದೆಹಲಿಯಲ್ಲಿ (New Delhi) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿದ್ದೆ. ರಾಜ್ಯಕ್ಕೆ ಬೇಕಿರುವ ಅಗತ್ಯ ಅಕ್ಕಿಯನ್ನು (Rice) ಕೊಡುವ ಭರವಸೆ ನೀಡಿದ್ದಾರೆ. ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ನಾನು ಸಿಎಂ ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಮುಂದಿನ ಹಂತದಲ್ಲಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು. ಇದನ್ನೂ ಓದಿ: ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!
ಎಷ್ಟು ಪ್ರಮಾಣ ಅಕ್ಕಿ ಕೇಳಬೇಕು ಎಂಬುದನ್ನು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದೇನೆ. ಈ ಹಿಂದೆ ಕೇಂದ್ರ ಅಕ್ಕಿ ಕೊಡದಿದ್ದಾಗ ಹಣವನ್ನು ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆಗೆ ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಬಗ್ಗೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ
ಎಸ್‌ಸಿ, ಎಸ್ಟಿ ಒಳ ಮೀಸಲಾತಿ ನೀಡುವ ಪ್ರತಿಕ್ರಿಯಿಸಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ನಾನು ಸ್ವಾಗತ ಮಾಡುತ್ತೇನೆ. 30 ವರ್ಷಗಳ ಕಾಲ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸುತ್ತಿದ್ದವು. ಯಾವ ಜಾತಿಗೂ ತೊಂದರೆಯಾಗದ ರೀತಿ ಎಲ್ಲಾ ರೀತಿಯಲ್ಲೂ ಅವಕಾಶ ಮಾಡಿಕೊಡಬೇಕು ಎಂಬ ನಿರ್ಧಾರವಾಗಿದೆ ಎಂದರು. ಇದನ್ನೂ ಓದಿ: ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ
ರಾಜ್ಯ ಸರ್ಕಾರಗಳು ನಿರ್ಧಾರ ಮಾಡಬೇಕು ಎಂದು ಕೋರ್ಟ್ ಹೇಳಿವೆ, ರಾಜ್ಯದಲ್ಲಿ ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಬೇಕು. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನ ಭೇಟಿಯಾಗಿ ಮನವಿ ಮಾಡಿದ್ದೇನೆ. ಎಐಸಿಸಿ ಸಭೆ ಕೂಡಾ ನಡೆಯುತ್ತಿದ್ದು, ಸಭೆಯಲ್ಲಿ ಎಲ್ಲಾ ರಾಜ್ಯದ ಅಧ್ಯಕ್ಷರು ಕೂಡ ಭಾಗಿಯಾಗಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ