ಸಾರಿಗೆ ಬಸ್, ಕಾರಿನ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
0 Min Read
GADAG ACCIDENT

ಗದಗ: ಸಾರಿಗೆ ಬಸ್ (NWKRTC Bus) ಹಾಗೂ ಕಾರು (Car) ನಡುವೆ ಭೀಕರ್ ಅಪಘಾತ (Accident) ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ನರಗುಂದದ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), ಐಶ್ವರ್ಯ (16) ಹಾಗೂ ವಿಜಯ (12) ಎಂದು ಗುರುತಿಸಲಾಗಿದೆ. ರುದ್ರಪ್ಪ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು ಎಂದು ತಿಳಿದು ಬಂದಿದೆ.

ನರಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Share This Article