ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ

Public TV
1 Min Read
Puttur Student Stab

ಮಂಗಳೂರು: ಪ್ರೇಮ ನಿವೇದನೆ (Love Proposal) ನಿರಾಕರಣೆ ಹಿನ್ನೆಲೆ ಅನ್ಯಕೋಮಿನ ಅಪ್ರಾಪ್ತೆ ವಿದ್ಯಾರ್ಥಿನಿ (Student) ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚಾಕುವಿನಿಂದ (Stab) ಇರಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನಲ್ಲಿ ನಡೆದಿದೆ.

ಹಿಂದೂ ವಿದ್ಯಾರ್ಥಿ ಚಾಕುವಿನಿಂದ ವಿದ್ಯಾರ್ಥಿನಿಯ ಕೈಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕೂಡ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

ಬುಕ್‌ಸ್ಟಾಲ್‌ನಿಂದ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ವಿದ್ಯಾರ್ಥಿ, ನಿನ್ನನ್ನು ಪ್ರೀತಿಸುವುದಾಗಿ ಹೇಳಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಅದನ್ನು ನಿರಾಕರಿಸಿದ್ದಾಳೆ. ಆಗ ಆತ ಕೈಗೆ ಚಾಕುವಿನಿಂದ ಇರಿದಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇಷ್ಟು ಮಾತ್ರವಲ್ಲದೇ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದರು. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.  ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್

ಘಟನೆ ಹಿನ್ನೆಲೆ ಆಸ್ಪತ್ರೆಯ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಆಸ್ಪತ್ರೆ ಬಳಿ ಜಮಾಯಿಸಿದ್ದ ಜನರನ್ನು ಪೋಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕೈಗೆ ಗಾಜು ತಾಗಿದೆ ಎಂದು ಕಾಲೇಜು ಪ್ರಾಂಶುಪಾಲರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ

Share This Article