ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿಕೆಶಿ

Public TV
1 Min Read
d.k.shivakumar KPCC

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಆನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

ಕುಮಾರಸ್ವಾಮಿ (H.D.Kumaraswamy) ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎಂಬುದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ ಎಂದಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ

rajiv gandhi 2

ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು. ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್‌ಗೆ ರಾಜೀವ್ ಗಾಂಧಿ ಹೆಸರಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್‌ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ. ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರೂ ಕುಟುಂಬ ದುಡಿದಿದೆ. ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ವಿಚಾರಗಳನ್ನು ನಾವು ಮರೆಯಬಾರದು ಎಂದಿದ್ದಾರೆ. ಇದನ್ನೂ ಓದಿ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

Share This Article