ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

Public TV
2 Min Read
Madhapar VIllage

– 7,000 ಕೋಟಿ ಮೌಲ್ಯದ ಸ್ಥಿರ ಠೇವಣಿ ಹೊಂದಿರುವ ಗ್ರಾಮಸ್ಥರು

ಗಾಂಧಿನಗರ: ಗುಜರಾತ್‌ನ (Gujarat) ಕಛ್‌ನಲ್ಲಿರುವ ಮಾಧಾಪರ್ (Madhapar) ಗ್ರಾಮವು ‘ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಗಳು ಹೇಳಿವೆ.

ಗುಜರಾತ್ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಭುಜ್‌ನ ಹೊರವಲಯದಲ್ಲಿರುವ ಮಾಧಾಪರ್ ಗ್ರಾಮದ ನಿವಾಸಿಗಳು 7,000 ಕೋಟಿ ಮೌಲ್ಯದ ಸ್ಥಿರ ಠೇವಣಿಯನ್ನು ಹೊಂದಿದ್ದಾರೆ. ಮಾಧಾಪರ್‌ನಲ್ಲಿ ‘ಪಟೇಲ್’ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಗ್ರಾಮದ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. 2011ರಲ್ಲಿ ಈ ಗ್ರಾಮದ ಜನಸಂಖ್ಯೆ 17,000 ಆಗಿತ್ತು. ಇದನ್ನೂ ಓದಿ: ಡೆಮಾಕ್ರಟಿಕ್ ಪಕ್ಷದ ಸಭೆಯಲ್ಲಿ ವೇದಮಂತ್ರಗಳ ಸದ್ದು – ಅಮೆರಿಕದಲ್ಲಿ ಬೆಂಗಳೂರು ಅರ್ಚಕರಿಂದ ವಿಶೇಷ ಪ್ರಾರ್ಥನೆ!

ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ ಒಟ್ಟು 17 ಬ್ಯಾಂಕ್‌ಗಳು ಈ ಒಂದೇ ಗ್ರಾಮದಲ್ಲಿದೆ. ಇಷ್ಟು ಮಾತ್ರವಲ್ಲದೇ ಇನ್ನೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ. ಇದನ್ನೂ ಓದಿ: ನಾಡದೇವಿ ಭುವನೇಶ್ವರಿ ಪ್ರತಿಮೆ ಸಿದ್ಧಗೊಳ್ಳುತ್ತಿರುವ ಸ್ಥಳಕ್ಕೆ ಸಚಿವ ತಂಗಡಗಿ ಭೇಟಿ, ಪರಿಶೀಲನೆ

ಈ ಬೆಳವಣಿಗೆಗೆ ಕಾರಣ ವಿದೇಶದಲ್ಲಿರುವ ಅನಿವಾಸಿ ಭಾರತೀಯರು. ಈ ಗ್ರಾಮದ ಅನೇಕರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿವರ್ಷ ಕೋಟಿಗಟ್ಟಲೆ ಹಣವನ್ನು ತಮ್ಮ ಗ್ರಾಮದ ಬ್ಯಾಂಕ್‌ಗಳಲ್ಲಿ ಠೇವಣಿ ಇಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಅದರಲ್ಲಿ 1,200 ಕುಟುಂಬಗಳು ವಿದೇಶದಲ್ಲಿ ವಾಸಿಸುತ್ತಿವೆ. ಈ ಪೈಕಿ ಆಫ್ರಿಕನ್ ದೇಶಗಳಲ್ಲಿ ಕೆಲಸ ಮಾಡುತ್ತಿರುವವರೇ ಹೆಚ್ಚು. ಇನ್ನೂ ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೇರಿಕಾ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ನೆಲೆಸಿದ್ದಾರೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

ಅನೇಕ ಗ್ರಾಮಸ್ಥರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸಿಸುತ್ತಿದ್ದರೂ ತಮ್ಮ ಗ್ರಾಮದ ನಂಟನ್ನು ಕಳೆದುಕೊಂಡಿಲ್ಲ. ಇನ್ನು ಅಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು ವಿದೇಶಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು

ಅಪಾರ ಠೇವಣಿ ಇಡುವುದರಿಂದ ಈ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲಭೂತ ಸೌಕರ್ಯಗಳನಮೀ ಗ್ರಾಮ ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಹಾಗೂ ಬಂಗಲೆಗಳು ಕೂಡ ಇಲ್ಲಿವೆ ಎಂದು ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

Share This Article