Renukaswamy Case | ಪ್ರಮುಖ ಸಾಕ್ಷಿ, ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

Public TV
2 Min Read
CHIKKANNA DARSHAN

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಹಾಸ್ಯನಟ ಚಿಕ್ಕಣ್ಣಗೆ (Chikkanna) ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ದರ್ಶನ್‌ (Darshan) ಮತ್ತು ಗ್ಯಾಂಗ್‌ ಸದಸ್ಯರ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಜಡ್ಜ್ ಎದುರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ದರ್ಶನ್‌ ಅವರನ್ನು ಭೇಟಿ ಮಾಡಿದ್ದರು.

ಸಾಧಾರಣವಾಗಿ ತನಿಖಾ ಹಂತದಲ್ಲಿರುವಾಗಲೇ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ (Jail) ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ಎಸ್‌ಐಟಿ ಶೀಘ್ರವೇ ನೋಟಿಸ್‌ ನೀಡುವ ಸಾಧ್ಯತೆಯಿದೆ.

Darshan 11

ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸುವ ಸಾಧ್ಯತೆಯಿದೆ. ಇದರ ಜೊತೆಯಲ್ಲಿ ಸಾಕ್ಷಿ-ಆರೋಪಿ ಭೇಟಿ ಬಗ್ಗೆ ಜೈಲಾಧಿಕಾರಿಗಳ ಬಳಿಯೂ ಮಾಹಿತಿ ಪಡೆಯಬಹುದು. ಅಷ್ಟೇ ಅಲ್ಲದೇ ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ.

ಜೂನ್ 8 ರಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು. ಪಾರ್ಟಿ ಬಳಿಕ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರೆ ಚಿಕ್ಕಣ್ಣ ಮನೆಗೆ ತೆರಳಿದ್ದರು. ಇದನ್ನೂ ಓದಿ: ಪ್ರಾಸಿಕ್ಯೂಷನ್‌ ವಾರ್‌ – ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್‌

RENUKASWAMY 1

ಚಿಕ್ಕಣ್ಣ ಪ್ರಮುಖ ಸಾಕ್ಷಿ ಹೇಗೆ?
ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ.

ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ (CrPC) 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಟಿ.ನರಸೀಪುರದಲ್ಲಿ 10 ಸ್ಫೋಟಕಗಳು ಪತ್ತೆ – ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ. ಈ ಕಾರಣಕ್ಕೆ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಏನು ಹೇಳಿಕೆ ನೀಡಿದ್ದಾರೋ ಅದೇ ಹೇಳಿಕೆಯನ್ನು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ ನಂತರ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹೇಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿದು ನಾನು ಹಿಂದೆ ಆ ರೀತಿಯ ಹೇಳಿಕೆ ನೀಡಿದ್ದೆ ಎಂಬ ಹೇಳಿಕೆಯನ್ನು ನೀಡಲು ಸಾಧ್ಯವಾಗುವುದಿಲ್ಲ.

 

Share This Article