Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

Public TV
1 Min Read
man arrested for allegedly raping 21 year old woman in Karkala udupi

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ (Karkala) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ (Rape) ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.

ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

Share This Article