ಬೆಂಗಳೂರು/ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ (Bengaluru Airport) ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ತುಮಕೂರು (Tumakuru) ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಕೊಲೆ ಆರೋಪಿ. ರಾಮಕೃಷ್ಣ (45) ಮೃತ ದುರ್ದೈವಿ. ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್ ಒಂದರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: Bengaluru | ಪ್ರೀತಿಸಿ ಮದ್ವೆಯಾದ ಪತ್ನಿಗೆ ಚಿತ್ರಹಿಂಸೆ ಕೊಟ್ಟು ಕೊಂದ ಪಾಪಿ ಪತಿ!
ಬಿಎಂಟಿಸಿ ಬಸ್‌ನಲ್ಲಿ ಏರ್‌ಪೋರ್ಟ್‌ಗೆ ಆಗಮಿಸಿದ ಕೊಲೆ ಆರೋಪಿ, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಫೋನ್‌ನಲ್ಲಿ ಆರೋಪಿ ಜಗಳ ಮಾಡಿದ್ದ. ಅದರ ಬೆನ್ನಲ್ಲೇ ಕೊಲೆ ಮಾಡಿದ್ದಾನೆ.
ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ಕೊಲೆ ನಡೆದಿದೆ. ರಕ್ತದ ಮಡುವಿನಲ್ಲಿ ಏರ್‌ಪೋರ್ಟ್‌ನಲ್ಲಿ ಯುವಕ ಮಡಿದಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹೆಂಡತಿ ಕೊಂದು ದೃಶ್ಯ ಸಿನಿಮಾ ಮಾದರಿಯಲ್ಲಿ ಹೂತಿಟ್ಟ; ಸ್ನೇಹಿತನ ಹೆಂಡತಿ ಕೊಲೆಯಲ್ಲಿ ಭಾಗಿಯಾಗಿ ಹಳೇ ಕೇಸಲ್ಲೂ ತಗ್ಲಾಕೊಂಡ ಖತರ್ನಾಕ್