ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ- ಐದು ಮಂದಿಯ ದಾರುಣ ಸಾವು

Public TV
2 Min Read
chikkaballapura car accident

-ತಂದೆ ತಾಯಿ ಮಗನ ದಾರುಣ ಸಾವು

ಚಿಕ್ಕಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು ಐದು ಮಂದಿಯ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಇದನ್ನೂ ಓದಿ: ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ – ದಾಸನಿಗಾಗಿ ರೂಟ್‌ ಮ್ಯಾಪ್‌ ಚೇಂಜ್‌?

ಮೃತರನ್ನು ಸೂರಜ್ (27) ಹಾಗೂ ಕಮಲ್ (26) ಗುರುತಿಸಲಾಗಿದ್ದು ಉತ್ತರ ಪ್ರದೇಶದ (Uttarpradesh) ಖಾನಾಪುರ್ (Khanapur) ನಿವಾಸಿಗಳು ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಜೈಸಿಂಗ್, ಯು ಜೈಸಿಂಗ್ ಅವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಇಬ್ಬರಿಗೆ ಹಿಂದೂಪೂರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವೈದ್ಯೆ ಅತ್ಯಾಚಾರ-ಕೊಲೆ ಕೇಸ್; ಐಎಂಎ ಸದಸ್ಯತ್ವದಿಂದ ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ವೈದ್ಯ ಡಾ. ಸಂದೀಪ್‌ ಅಮಾನತು‌

ಆರು ಮಂದಿ ಆಂಧ್ರಪ್ರದೇಶದ (Andrapradesh) ಸತ್ಯಸಾಯಿ ಜಿಲ್ಲೆಯ ಹಿಂದೂಪುರ ಬಳಿಯ ಕೈಗಾರಿಕಾ ಪ್ರದೇಶ ಶ್ಯಾಮ್ ಪೈರಷ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ಗೌರಿಬಿದನೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅತಿ ವೇಗವೇ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Video | ರಾತ್ರೋರಾತ್ರಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ!

ಇನ್ನೂ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗ ಶ್ರೀಕಾಂತ್, ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಮೃತಪಟ್ಟಿದ್ದಾರೆ. ಟಿಟಿಯಲ್ಲಿದ್ದ 12 ಮಂದಿಯೂ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ – ಮಗುವಿನ ಅಪ್ಪನ ಸ್ನೇಹಿತನಿಂದಲೇ ಕೃತ್ಯ

Share This Article