ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ – 9 ಸಾವು, ಜನಜೀವನ ಅಸ್ತವ್ಯಸ್ತ

Public TV
2 Min Read
Andhra Telangana Rain

– 30ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ತೀವ್ರ ವ್ಯತ್ಯಯ
-294 ಗ್ರಾಮಗಳಿಂದ 13,227 ಜನರ ಸ್ಥಳಾಂತರ

ಆಂಧ್ರ/ತೆಲಂಗಾಣ: ಆಗಸ್ಟ್ ಮಾದರಿಯಲ್ಲೇ ಸೆಪ್ಟೆಂಬರ್‌ನಲ್ಲಿ ಹೆಚ್ಚು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದಕ್ಕೆ ಪೂರಕ ಎಂಬಂತೆ ಆಂಧ್ರ-ತೆಲಂಗಾಣದಲ್ಲಿ (Andhra Pradesh-Telangana) ಕಳೆದ 30 ವರ್ಷದಲ್ಲಿ ಕಂಡೂ ಕೇಳರಿಯದ ರೀತಿಯಲ್ಲಿ ಕುಂಭದ್ರೋಣ ಮಳೆ (Rain) ಆಗುತ್ತಿದ್ದು, ಬಹುತೇಕ ಕಡೆ ಪ್ರವಾಹ (Flood) ಸ್ಥಿತಿ ನಿರ್ಮಾಣವಾಗಿದೆ.

ವಿಜಯವಾಡದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 290 ಮಿಲಿ ಮೀಟರ್ ಮಳೆ ಆಗಿದೆ. ಇಡೀ ನಗರ ಜಲಾವೃತವಾಗಿದೆ. ಆಂಧ್ರ-ತೆಲಂಗಾಣ ಹೈವೇಗಳಲ್ಲಿ ನದಿಯೋಪಾದಿಯಲ್ಲಿ ನೀರು ಹರಿಯುತ್ತಿರುವ ಕಾರಣ ಸಂಚಾರ ಬಂದ್ ಆಗಿದೆ. ಬಸ್ ಸಂಚಾರ, ರೈಲು ಸಂಚಾರ ಬಂದ್ ಆಗಿದೆ. 30ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿದೆ. ವರಂಗಲ್ ಬಳಿ ಪ್ರವಾಹದಲ್ಲಿ ಬಸ್ ಸಿಲುಕಿ, ಅದರಲ್ಲಿದ್ದ 40 ಮಂದಿ ಇಡೀ ರಾತ್ರಿ ಪರದಾಡಿದ್ದಾರೆ. ಕೋದಾಡ ಬಳಿ ಪ್ರವಾಹದಲ್ಲಿ ಕೊಚ್ಚಿಬಂದ ಕಾರಿನಲ್ಲಿ ಯುವಕನ ಶವ ಪತ್ತೆಯಾಗಿದೆ. ಅನೇಕ ಕಡೆ ಕೊಚ್ಚಿ ಹೋಗುತ್ತಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಮಹಾ ಮಳೆಗೆ ಅವಾಂತರ – ಸೋಮವಾರ ಬೀದರ್‌ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Andhra Telangana Rain 3

ಆಂಧ್ರಪ್ರದೇಶದಲ್ಲಿ ವಿಜಯವಾಡ ಗ್ರಾಮಾಂತರ ಮಂಡಲದ ಅಂಬಾಪುರಂ, ನೈನಾವರಂ, ನುನ್ನಾ, ಪತಪಡು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ. ಪೊಲೀಸ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಸಂತ್ರಸ್ತರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ವೆಹಿಕಲ್‌ಗಳ ಕಾರ್ಯಾರಂಭ

Andhra Telangana Rain 2

ಆಂಧ್ರ ಮಳೆಗೆ 9 ಸಾವು:
ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಭಾನುವಾರ ಹಿರಿಯ ಅಧಿಕಾರಿಗಳೊಂದಿಗೆ ಹವಾಮಾನ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರವಾಹವನ್ನು ನಿರ್ಣಯಿಸಲು ಡ್ರೋನ್‌ಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಲು ಮತ್ತು ಅದಕ್ಕೆ ಅನುಗುಣವಾಗಿ ಪರಿಹಾರ ಕಾರ್ಯಗಳನ್ನು ಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮೆಡಿಕಲ್ ಸೀಟ್ ಸಿಗದೇ ಮನನೊಂದು ಯುವತಿ ಆತ್ಮಹತ್ಯೆ

Andhra Telangana Rain 1

ಐದು ಜಿಲ್ಲೆಗಳ 294 ಗ್ರಾಮಗಳಿಂದ 13,227 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶದ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ. ಇದುವರೆಗೆ ಭಾರೀ ಮಳೆಯಿಂದಾಗಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಪೊಲೀಸರು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 600 ಜನರನ್ನು ರಕ್ಷಿಸಿವೆ. 17 ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಏಳು ಜಿಲ್ಲೆಗಳಲ್ಲಿ 22 ಮುಳುಗಿದ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ ಎಂದು ಅನಿತಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲು

ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಮತ್ತು ಎರಡೂ ರಾಜ್ಯಗಳ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

Share This Article